ಬೀದರ್

ಬೀದರ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ-ಸಚಿವ ಪ್ರಭು ಬಿ.ಚವ್ಹಾಣ

ಬೀದರ :  ಬೀದರ ಉತ್ಸವದ ಉದ್ಘಾಟನೆ ಕಾರ್ಯಕ್ರಮ ನಿನ್ನೆ ಅದ್ದೂರಿಯಾಗಿ ನಡೆಯಿತು ಈ ಉತ್ಸವವು ಪ್ರತಿ ವರ್ಷ ಆಚರಿಸಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಹೇಳಿದರು.

ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಬೀದರ ಉತ್ಸವ-2023ರ ಅಂಗವಾಗಿ ಬೀದರ ಕೋಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಶ್ವಾನ ಪ್ರದರ್ಶನ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಯಿಗಳು ನಿಯತ್ತಿಗೆ ಹೆಸರು ವಾಸಿಯಾಗಿದ್ದು ಅದು ಕೇವಲ ಮನೆ ಕಾಯುವುದು ಮಾತ್ರವಲ್ಲ ತನ್ನ ಯಜಮಾನನ ರಕ್ಷಣೆ ಮಾಡುತ್ತದೆ. ಜಾಕಿ ಶರೀಫ್ ಅವರ ಹಿಂದಿ ಚಲನಚಿತ್ರ ನೋಡಿದರೆ ಗೊತ್ತಾಗುತ್ತದೆ. ಮಾನವಿಯತೆಗೆ ಮತ್ತೊಂದು ಹೆಸರೇ ನಾಯಿ, ಅದು ಅಷ್ಟೊಂದು ಪ್ರಮಾಣಿಕತೆಗೆ ಹೆಸರು ವಾಸಿಯಾಗಿದೆ, ಪಶು ಸಂಗೋಪನೆ ಇಲಾಖೆ ವತಿಯಿಂದ ಪ್ರಾಣಿಗಳಿಗೆ ರಾಜ್ಯದಲ್ಲಿ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಹೇಳಿದರು.

ಬೀದರ ಉತ್ಸವದ ಹಲವಾರು ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿವೆ. ಜಿಲ್ಲಾಧಿಕಾರಿಗಳು ಮತ್ತು ಅವರ ತಂಡ ಒಳ್ಳೆಯ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಉತ್ಸವ ಯಶಸ್ವಿಯಾಗಿ ನಡೆಯುತ್ತಿದೆ. ಜಿಲೆಯ ಎಲ್ಲಾ ಜನರು ಈ ಉತ್ಸವದಲ್ಲಿ ಭಾಗವಹಿಸಿ ಇದರ ಆನಂದವನ್ನು ಕಣ್ಣ ತುಂಬಿಕೊಳ್ಳಬೇಕೆAದು ಹೇಳಿದರು.

ಬೀದರ ಶಾಸಕರಾದ ರಹೀಮ ಖಾನ್ ಅವರು ಮಾತನಾಡಿ, ಹಿಂದಿನ ಉತ್ಸವಕ್ಕಿಂತ ಈ ಉತ್ಸವದಲ್ಲಿ ಹಲವಾರು ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ನಾಯಿಗಳ ಬಗ್ಗೆ ನಾವು ಹಲವಾರು ಕಥೆಗಳನ್ನು ಕೇಳಿರುತ್ತೇವೆ ಅದು ತನ್ನ ಮಾಲೀಕನಿಗೆ ಜೀವನ ಪೂರ್ತಿ ನಿಯತ್ತಿನಿಂದ ಕೆಲಸ ಮಾಡುತ್ತದೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ತಳಿಯ 130 ಶ್ವಾನಗಳು ಭಾಗವಹಿಸಿದ್ದವು. ಈ ಶ್ವಾನ ಮೇಳದ ಉದ್ದೇಶ ಶ್ವಾನಗಳ ಪಾಲನೆ, ಪೋಷಣೆ ಮತ್ತು ಅವುಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ರೇಬಿಸ್ ಮಾರಕ ಕಾಯಿಲೆ ನಿರ್ವಹಣೆ ಕುರಿತಾಗಿರುತ್ತದೆ. ಈ ಪ್ರದರ್ಶನದಲ್ಲಿ ಭಾಗವಹಿಸಿದ ನಾಯಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ಧಿನ್ ಕಛೇರಿವಾಲೆ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರಬಾಬು, ಪಶು ಪಾಲನೆ ಮತ್ತು ಪಶು ವೈದ್ಯ ಸೇವೆ ಇಲಾಖೆಯ ಉಪ ನಿರ್ದೇಶಕರಾದ ಡಾ.ನಂದಿಶ, ಪಾಲಿ ಕ್ಲಿನಿಕ್‌ನ ಉಪನಿರ್ದೇಶಕರಾದ ಡಾ.ರವೀಂದ್ರಕುಮಾರ, ವೆಟರ್ನರಿ ಕಾಲೇಜಿನ್ ಡೀನ್ ಡಾ.ದಿಲೀಪಕುಮಾರ, ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ ಸೇರಿದಂತೆ ಹಲವಾರು ಜನರು ಈ ಶ್ವಾನ ಮೇಳದಲ್ಲಿ ಭಾಗವಹಿಸಿದ್ದರು.

Sneha Gowda

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

18 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

46 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago