Categories: ಬೀದರ್

ಬೀದರ್: ಕೃಷಿ ಉತ್ಪನ್ನಗಳ ಸಂಗ್ರಹದ ಗೋದಾಮು ಕಾಮಗಾರಿ ನನೆಗುದಿಗೆ

ಔರಾದ್: ಪಟ್ಟಣದ ಹೊರ ವಲಯದ ಕೃಷಿ ತರಬೇತಿ ಕೇಂದ್ರದ ಬಳಿ ಕೃಷಿ ಉತ್ಪನ್ನಗಳ ಸಂಗ್ರಹಕ್ಕೆ ನಿರ್ಮಿಸಲಾಗುತ್ತಿರುವ ಎರಡು ದೊಡ್ಡ ಗೋದಾಮುಗಳ ಕಾಮಗಾರಿ ಪೂರ್ಣಗೊಂಡಿಲ್ಲ.

ಕರ್ನಾಟಕ ರಾಜ್ಯ ಉಗ್ರಾಣ ನಿಗಮದಿಂದ 2015-16ನೇ ಸಾಲಿನಲ್ಲಿ ಸುಮಾರು ₹1,139.86 ಲಕ್ಷ ವೆಚ್ಚದಲ್ಲಿ ಎರಡು ಗೋದಾಮು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಗೋಡೆ ನಿರ್ಮಾಣ ಪೂರ್ಣವಾಗಿದೆ. ಆದರೆ ಚಾವಣಿಗಾಗಿ ಕಬ್ಬಿನದ ಸರಳುಗಳನ್ನು ಹಾಕಿ ಹಾಗೇ ಬಿಡಲಾಗಿದೆ. ಏಳು ವರ್ಷಗಳಾದರೂ ಕಾಮಗಾರಿ ಮುಗಿಯದ್ದರಿಂದ ಕಬ್ಬಿಣದ ಸಲಾಕೆಗಳು ತುಕ್ಕು ಹಿಡಿದಿವೆ.

‘ಉಗ್ರಾಣದ ಕಟ್ಟಡದ ಒಳಗೆ ಹುಲ್ಲು ಮುಳ್ಳಿನ ಪೊದೆ ಬೆಳೆದು ಒಳಗೆ ಹೋಗಲು ಭಯವಾಗುತ್ತಿದೆ’ ಎಂದು ಸ್ಥಳೀಯ ರೈತರು ಹೇಳುತ್ತಾರೆ.

‘ಈ ಗೋದಾಮು ಕಾಮಗಾರಿ ನನೆಗುದಿಗೆ ಬಿದ್ದಿರುವ ಕುರಿತು ಸಾಕಷ್ಟು ಬಾರಿ ಸಂಬಂಧಿತರ ಗಮನಕ್ಕೆ ತಂದಿದ್ದೇವೆ. ಆದರೂ ಯಾವುದೇ ಕ್ರಮ ಆಗಿಲ್ಲ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತರಿಗೆ ದೂರು: ಗೋದಾಮು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ ಪರಿಣಾಮ ಸರ್ಕಾರದ ಕೋಟ್ಯಂತರ ರೂಪಾಯಿ ನಷ್ಟ ಆಗಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು 2023 ಜನವರಿಯಲ್ಲೇ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.

‘2015-16ರಲ್ಲಿ ಗೋದಾಮು ಕಾಮಗಾರಿಗೆ ₹1,139.86 ಲಕ್ಷ ಅಂದಾಜು ವೆಚ್ಚ ಇತ್ತು ಆದರೆ ಪರಿಷ್ಕೃತ ದರ ₹13 ಕೋಟಿಯಾಗಿದೆ. ಹಿಂದಿನ ಎಲ್ಲವೂ ವ್ಯರ್ಥವಾದಂತಾಗಿದ್ದು ಈಗ ಪುನಃ ಹೊಸ ಗೋದಾಮು ನಿರ್ಮಿಸಬೇಕಾಗುತ್ತದೆ. ಈ ಎಲ್ಲವುಗಳ ಬಗ್ಗೆ ದಾಖಲೆ ಸಂಗ್ರಹಿಸಿ ಕಳೆದ ತಿಂಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನೂ ದಾಖಲಿಸಲಾಗಿದೆ’ ಎಂದು ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ತಿಳಿಸಿದ್ದಾರೆ.

Ashika S

Recent Posts

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

15 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

36 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

54 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

1 hour ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

3 hours ago