ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಘಾಟಬೋರಾಳ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಗೋವಿನ ಸಗಣಿ ಎಸೆದಿರುವ ಆಘಾತಕಾರಿ ಘಟನೆ ನ.27ರಂದು ನಡೆದಿದೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಗೋವಿನ ಸಗಣಿ ಎಸೆದಿರುವ ವಿಷಯ ತಿಳಿದ ನೂರಾರು ಜನರು ವೃತ್ತದಲ್ಲಿ ಜಮಾಯಿಸಿದ್ದರು.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ತಹಶೀಲ್ದಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.