ಬೀದರ್: ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ನಗರದ ಗಾಂಧಿ ಗಂಜ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.
ಗಾಂಧಿಗಂಜ್ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ವ್ಯಾಪಾರಿಗಳು, ಅಂಗಡಿಗಳ ಮಾಲೀಕರು ಹಾಗೂ ಕೆಲಸಗಾರರ ಬಳಿ ಹೋಗಿ ಮತ ಕೇಳಿದರು.
‘ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದೆ. ಅನೇಕ ಬಗೆಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನನಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.
‘ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಮತ ನೀಡಬೇಕು’ ಎಂದರು.
ಬೀದರ್ ಟ್ರಾನ್ಸ್ಫೋರ್ಸ್ ಅಸೋಸಿಯೇಷನ್ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಚಂದ್ರಶೇಖರ ಗಾದಾ, ಡಾ. ಉಪ್ಪೆ ಮೊದಲಾದವರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.