News Karnataka Kannada
Friday, May 03 2024
ಬೀದರ್

ಬೀದರ್‌: ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ, ರೈತರಿಗೆ ಪ್ರಯೋಜನ – ಭಗವಂತ ಖೂಬಾ

'ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ' ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದರು.
Photo Credit : News Kannada

ಬೀದರ್‌: ‘ಪ್ರಧಾನಿ ನರೇಂದ್ರ ಮೋದಿಯವರು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿರುವುದರಿಂದ ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಲಕ್ಷ ರೈತರಿಗೆ ಪ್ರಯೋಜನವಾಗಲಿದೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಮೋದಿಯವರು ಸದಾಕಾಲ ದೇಶದ ಬೆನ್ನೆಲುಬಾದ ಅನ್ನದಾತನ ಬೆನ್ನಿಗೆ ನಿಂತಿದ್ದಾರೆ. ಅವರ ಈ ನಿರ್ಧಾರದಿಂದ ಮತ್ತೊಮ್ಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೇಂದ್ರ ಸರ್ಕಾರವು ದೇಶದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.

ಬೀದರ್‌ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬೆಳೆಯುವ ತೊಗರಿ ಬೇಳೆಗೆ ₹ 7,000 (₹ 400 ಹೆಚ್ಚಳ), ಹೆಸರು ಬೇಳೆಗೆ ₹ 8,558 (₹ 803 ಹೆಚ್ಚಳ), ಉದ್ದಿನ ಬೇಳೆಗೆ ₹ 6,950 (₹ 350 ಹೆಚ್ಚಳ), ಸೂರ್ಯಕಾಂತಿ ಬೀಜ ₹ 6,760 (₹ 360 ಹೆಚ್ಚಳ), ಸೋಯಾಬೀನ್ ಹಳದಿ ₹ 4,600 (₹ 300 ಹೆಚ್ಚಳ), ಜೋಳ ಹೈಬ್ರಿಡ್ ₹ 3,180 (₹ 210 ಹೆಚ್ಚಳ), ಜೋಳ ಮಾಲ್ದಂಡಿ ₹ 3,225 (₹ 235 ಹೆಚ್ಚಳ) ಸೇರಿದಂತೆ ಇತರೆ ಬೆಳೆಗಳಿಗೆ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ಘೋಷಿಸಲಾಗಿದೆ. ರೈತರು ಇದರ ಪ್ರಯೋಜನ ಪಡೆಯಬೇಕು. ಈ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು