News Karnataka Kannada
Monday, May 20 2024
ಬೀದರ್

ಬೀದರ್: ಈಶ್ವರ ಖಂಡ್ರೆಗೆ ಸಚಿವ ಸ್ಥಾನ: ವಿಜಯಸಿಂಗ್ ಒತ್ತಾಯ

Bidar: Ministership to Ishwar Khandre: Vijay Singh insisted
Photo Credit :

ಬೀದರ್: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಒತ್ತಾಯಿಸಿದ್ದಾರೆ. ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷ ಬಲಪಡಿಸಲು ಶ್ರಮಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಇವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವೀರಶೈವ ಲಿಂಗಾಯತ ಸೇರಿದಂತೆ ಎಲ್ಲ ಸಮುದಾಯಗಳ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರಲು ಕಾರಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಸತತ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ಹಿರಿಯ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವವನ್ನೂ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡಿದರೆ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾ ಸಿಗಲಿದೆ. ರಾಜ್ಯದ ಅಭಿವೃದ್ಧಿಗೂ ನೆರವಾಗಲಿದೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು