Categories: ಬೀದರ್

ಬೀದರ್: ಪರಿಹಾರ ಮೊತ್ತ 50 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಿದ ಶಾಸಕ

ಬೀದರ್: ಕಾಲುಬಾಯಿ ರೋಗ ಮತ್ತು ಇತರೆ ಕಾಯಿಲೆಗಳಿಂದ ಮೃತಪಟ್ಟ ಜಾನುವಾರುಗಳಿಗೆ ಪ್ರಸ್ತುತ ನೀಡುತ್ತಿರುವ ಪರಿಹಾರಧನದ ಮೊತ್ತ ಬಹಳಷ್ಟು ಕಡಿಮೆಯಿದ್ದು, ಅದನ್ನು 50 ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕೆಂದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿ ಆಗ್ರಹಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಬಜೆಟ್ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಕಾಲುಬಾಯಿ ರೋಗ ಮತ್ತು ಇತರೆ ಕಾಯಿಲೆಗಳಿಂದ ಮೃತಪಟ್ಟ ಜಾನುವಾರುಗಳಿಗೆ ಸಂಬಂಧಿಸಿದ ಚುಕ್ಕೆಗುರುತಿನ ಪ್ರಶ್ನೆ ಕೇಳಿ ಮಾತನಾಡಿದ ಅವರು, ಮೃತ ಜಾನುವಾರುಗಳಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರವನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಬೀದರ್ ಜಿಲ್ಲೆಯಲ್ಲಿ 108, ಬೀದರ್ ದಕ್ಷಿಣ ಕ್ಷೇತ್ರದಲ್ಲಿ 04 ಜಾನುವಾರುಗಳು ಮೃತಪಟ್ಟಿವೆ ಎಂದು ಸಚಿವರು ಉತ್ತರ ನೀಡಿದ್ದಾರೆ. ವಾಸ್ತವವಾಗಿ ನೋಡುವುದಾದರೇ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಜಾನುವಾರುಗಳು ಮೃತಪಟ್ಟಿವೆ. ಮೃತ ಕರುವಿಗೆ 05 ಸಾವಿರ ರೂ., ದೊಡ್ಡಜಾನುವಾರುಗಳಿಗೆ 20 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಒಂದು ಆಕಳು 1 ಲಕ್ಷ ರೂ.ಗಿಂತ ಕಡಿಮೆ ಮೊತ್ತದಲ್ಲಿ ಸಿಗುವುದಿಲ್ಲ. ರೈತರ ಪರವಾದ ಸರ್ಕಾರ, ಬಡವರ ಪರವಾದ ಸರ್ಕಾರ ಅಂದ್ರೆ ಇದೇನಾ..? ಏನಿದು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಕ್ರೋಶಗೊಂಡರು.

ಮಧ್ಯಪ್ರವೇಶಿದ ಸಚಿವ ಮಾಧುಸ್ವಾಮಿರವರು, ಸರ್ಕಾರವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಸರ್ಕಾರ ನೀಡುತ್ತಿರುವ ಪರಿಹಾರದ ಮೊತ್ತವನ್ನು ಕನಿಷ್ಟ 50 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ಈಗ ನೀಡುತ್ತಿರುವ ಪರಿಹಾರ ನ್ಯಾಯಯುತವಾದದ್ದಲ್ಲ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡರು ಸೇರಿದಂತೆ ಅನೇಕರು ಬಂಡೆಪ್ಪ ಖಾಶೆಂಪುರ್ ರವರ ಮಾತಿಗೆ ಧ್ವನಿ ಗುಡಿಸಿದರು.

ಉತ್ತರ ನೀಡಿ ಮಾತನಾಡಿದ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ರವರು, ಚರ್ಮಗಂಟು ರೋಗಕ್ಕೆ ಬೇರೆ ಯಾವ ರಾಜ್ಯದಲ್ಲೂ ಪರಿಹಾರ ನೀಡುತ್ತಿಲ್ಲ. ಮೊದಲ ಬಾರಿಗೆ ನಾನು ಕರ್ನಾಟಕದಲ್ಲಿ ಆರಂಭಿಸಿದ್ದೇನೆ. 37 ಕೋಟಿ ರೂ. ಪರಿಹಾರ ನೀಡಲಾಗಿದೆ. ಇನ್ನೂಳಿದದ್ದು ನೀಡಬೇಕಿದೆ. ಪರಿಹಾರದ ಮೊತ್ತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಟ್ಟಿಗೆ ಚರ್ಚಿಸುತ್ತೇನೆ ಎಂದರು.

Ashika S

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

11 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

12 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

27 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

30 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

54 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago