Categories: ಬೀದರ್

ಬೀದರ್: ಆಂಬ್ಯುಲೆನ್ಸ್ ಸೇವೆಗೆ ಶಾಸಕ ರಹೀಂಖಾನ್ ಚಾಲನೆ

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಶಾಸಕರ ನಿಧಿಯಲ್ಲಿ ಎರಡು ಆಂಬ್ಯುಲೆನ್ಸ್ ಗಳ ಸೇವೆಗೆ ಶಾಸಕ ರಹೀಂಖಾನ್ ಬೀದರ್ ತಾಲ್ಲೂಕಿನ ಜನವಾಡದಲ್ಲಿ ಚಾಲನೆ ನೀಡಿದರು.

ಗ್ರಾಮೀಣ ಜನರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಶಾಸಕರ ನಿಧಿಯ ರೂ. 42 ಲಕ್ಷ ವೆಚ್ಚದಲ್ಲಿ ಜನವಾಡ ಹಾಗೂ ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬ್ಯುಲೆನ್ಸ್ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಯಿ- ಮಕ್ಕಳ ಆಸ್ಪತ್ರೆ ಹಾಗೂ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಗಳು ನೆರವಾಗಲಿವೆ ಎಂದು ಹೇಳಿದರು.

ಜನವಾಡ ಹಾಗೂ ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮಗಳ ಜನ ಆಂಬ್ಯುಲೆನ್ಸ್ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನನ್ನ ಅಧಿಕಾರ ಅವಧಿಯಲ್ಲಿ ಬೀದರ್ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಜನರ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿದ್ದೇನೆ. ಮತದಾರರು ಮತ್ತೊಮ್ಮೆ ಅವಕಾಶ ನೀಡಿದರೆ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ಇದೆ ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಇದ್ದರು.

Gayathri SG

Recent Posts

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

6 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

22 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

45 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

2 hours ago