ಬೀದರ್

ಬೀದರ್: ವಸತಿ ನಿಲಯಕ್ಕೆ ಶಾಸಕ ಭೇಟಿ, ವಾರ್ಡನ್‌ಗೆ ತರಾಟೆ

ಹುಮನಾಬಾದ್: ತಾಲ್ಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ಶನಿವಾರ ಭೇಟಿ ನೀಡಿ ಅವ್ಯವಸ್ಥೆ ಕಂಡು ವಾರ್ಡನ್‌ರನ್ನು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳು ಶಾಸಕರ ಎದುರು ವಸತಿ ನಿಲಯದ ಸಮಸ್ಯೆಗಳನ್ನು ಬಿಚ್ಚಿಟ್ಟರು. ನಿಲಯದ ಅಡುಗೆ ಕೋಣೆ ಹಾಗೂ ಆಹಾರ ಪದಾರ್ಥಗಳನ್ನು ಶಾಸಕರು ಪರಿಶೀಲಿಸಿದರು. ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ ಆಹಾರವನ್ನು ಮಕ್ಕಳೊಂದಿಗೆ ಸೇವಿಸಿದರು. ಸಾಂಬಾರ್‌ನಲ್ಲಿ ಒಂದೇ ಒಂದೂ ತರಕಾರಿ ಹಾಕಿಲ್ಲ ಯಾಕೆ ಎಂದು ವಾರ್ಡನ್‌ರನ್ನು ಪ್ರಶ್ನಿಸಿದರು.

ಶಿಕ್ಷಕರು ಸಮಾಜವನ್ನು ತಿದ್ದುವ ಶಿಲ್ಪಿಗಳಾಗಿರಬೇಕು. ಆದರೆ, ಶಿಕ್ಷಕರಾದ ನೀವೇ ಮಕ್ಕಳಿಗೆ ತರಕಾರಿ ಇಲ್ಲದ ಆಹಾರ ನೀಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು. ಮಕ್ಕಳು ದೇವರಿದ್ದಂತೆ. ಮಕ್ಕಳಿಗೆ ಮೋಸ ಮಾಡುತ್ತಿರುವ ನಿಮ್ಮನ್ನು ಭಗವಂತ ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದರು.

ಈ ಶಾಲೆಯಲ್ಲಿ ಬಹುತೇಕ ಗ್ರಾಮೀಣ ಪ್ರದೇಶದ ಬಡವರ ಮಕ್ಕಳೇ ಹೆಚ್ಚಾಗಿ ಓದುತ್ತಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಹಾರದಲ್ಲಿ ಯಾವುದೇ ವ್ಯತ್ಯಾಸ ಕಂಡರೆ ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಾಗಭೂಷಣ ಸಂಗಮ್, ಗಿರೀಶ ತುಂಬಾ, ಗೋಪಾಲಕೃಷ್ಣ ಮೋಹಳೆ, ಜ್ಞಾನದೇವ ಧೂಮಾಳೆ, ಸಂಜು ವಾಡೇಕರ್, ಪ್ರಕಾಶ ಮಣಿಗೀರೆ, ರಾಹುಲ್ ಪಾಟೀಲ ಹಾಗೂ ಸಾಗರ ಭೂರಿ ಇದ್ದರು.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

25 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

41 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago