Categories: ಬೀದರ್

ಬೀದರ್: ಹಾರ ತುರಾಯಿ ಬೇಡ , ನನಗೆ ಯಾರೂ ಸನ್ಮಾನ ಮಾಡಬೇಡಿ – ಸಚಿವ ಈಶ್ವರ ಖಂಡ್ರೆ ಮನವಿ

ಬೀದರ್: ಸಚಿವರಾದ ದಿನದಿಂದಲೂ ನಿತ್ಯ ಬೀದರ್ ಜಿಲ್ಲೆಯ ಅದರಲ್ಲೂ ಭಾಲ್ಕಿ ಕ್ಷೇತ್ರದಿಂದ ಬೆಂಗಳೂರಿನವರೆಗೆ ಸಾವಿರಾರು ಜನರು ಆಗಮಿಸಿ, ತಮಗೆ ಹಾರ, ತುರಾಯಿ ನೀಡಿ, ಶಾಲು ಹೊದಿಸಿ ಸನ್ಮಾನ ಮಾಡುತ್ತಿದ್ದು, ಮತದಾರರು ಮತ್ತು ಜನತೆಯ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ತಮಗೆ ಯಾರೂ ಸನ್ಮಾನ ಮಾಡಬಾರದೆಂದು ಮನವಿ ಮಾಡಿದ್ದಾರೆ.

ಸುಮಾರು 7೦೦ ಕಿಲೋ ಮೀಟರ್ ದೂರದಿಂದ 4-5 ಸಾವಿರ ರೂಪಾಯಿ ವೆಚ್ಚ ಮಾಡಿಕೊಂಡು ಬೆಂಗಳೂರಿಗೆ ಸಾವಿರಾರು ಜನರು ಬರುತ್ತಿದ್ದಾರೆ. ಹೀಗೆ ಬರುವವರನ್ನು ತಾವು ಸಚಿವ ಸಂಪುಟ ಸಭೆ, ಅಧಿಕಾರಿಗಳ ಸಭೆ-ಸಮಾರಂಭಗಳಲ್ಲಿದ್ದಾಗ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇದು ತಮಗೂ ನೋವು ತಂದಿದೆ. ಈ ಹಿನ್ನೆಲೆಯಲ್ಲಿ ಯಾರೂ ಸಹ ಬೀದರ್ ಭಾಲ್ಕಿಯಿಂದ ಬೆಂಗಳೂರಿಗೆ ಆಗಮಿಸಿ, ತಮಗೆ ಸನ್ಮಾನ ಮಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಜಿಲ್ಲೆಯ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ತಾವು ಆಭಾರಿ ಎಂದು ತಿಳಿಸಿರುವ ಸಚಿವರು, ಬೆಂಗಳೂರಿನವರೆಗೆ ಆಗಮಿಸಿ, ಶ್ರಮಪಡಬೇಡಿ. ತಾವೆ ಎರಡು ಮೂರು ದಿನದಲ್ಲಿ ಬೀದರ್ ಜಿಲ್ಲೆಗೆ ಆಗಮಿಸಲಿದ್ದು, ಹಂತ ಹಂತವಾಗಿ ತಾಲೂಕು ಮಟ್ಟ, ಹೋಬಳಿ ಮಟ್ಟ, ಪಂಚಾಯ್ತಿ ಮಟ್ಟ ಮತ್ತು ಗ್ರಾಮ ಮಟ್ಟದಲ್ಲಿ ಪ್ರವಾಸ ಮಾಡಿ ಜನರ ಅಹವಾಲು ಆಲಿಸುವುದಾಗಿ ಮತ್ತು ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ನಾಡಿನಾದ್ಯಂತದ ಜನತೆ, ತಮಗೆ ತೋರಿಸುತ್ತಿರುವ ಪ್ರೀತಿ, ವಾತ್ಸಲ್ಯಕ್ಕೆ ತಾವು ಋಣಿ. ಎಂದು ತಿಳಿಸಿ, ಎಲ್ಲರ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿರುವ ಈಶ್ವರ ಖಂಡ್ರೆ, ಫ್ಲೆಕ್ಸ್ ಹಾಕುವುದಾಗಲಿ, ಸನ್ಮಾನ ಮಾಡುವುದಾಗಲಿ ಬೇಡ ಎಂದು ಜನತೆಗೆ ಮನವಿಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

51 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago