Categories: ಬೀದರ್

ಬೀದರ್: ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಿ- ಎನ್ ಎಸ್ ಯುಐ ಪ್ರತಿಭಟನೆ

ಬೀದರ್: ‘ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ತಡೆ ಸೇರಿದಂತೆ ಜ್ವಲಂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಘಟಕದ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೂಲಿಕಾರರು ಹಾಗೂ ಬಡವರು ಕೂಲಿ ಮಾಡಿ ಬದುಕು ಸಾಗಿಸುವುದು ಕಷ್ಟವಾಗಿದೆ. ಆದ್ದರಿಂದ ಅಗತ್ಯ ವಸ್ತುಗಳ ಬೆಲೆ ನಿತಂತ್ರಿಸಬೇಕು. ನಿರುದ್ಯೋಗಿಗಳಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ಐ.ಟಿ.ಐ., ಡಿಪ್ಲೊಮಾ ಹೀಗೆ ವೃತ್ತಿಪರ ಶಿಕ್ಷಣ ಪಡೆದವರು ಹಾಗೂ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಕೆಲಸ ಸಿಗದ ಕಾರಣ ಸಣ್ಣಪುಟ್ಟ ಕೆಲಸ ಮಾಡಲು ನೆರೆಯ ಹೈದರಾಬಾದ್‌ಗೆ ವಲಸೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೆ ಪ್ರದೇಶದಲ್ಲಿರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗ ಕೊಡುತ್ತಿಲ್ಲ ಎಂದು ದೂರಿದರು.

ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಂದ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. ಬಡ ಕುಟುಂಬದ ಮಕ್ಕಳು ಶಿಕ್ಷಣ ಪಡೆಯುವುದು ಕಷ್ಟವಾಗಿದೆ. ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೀದರ್‌ ನಗರದಿಂದ ಆಣದೂರ, ಕಪಲಾಪುರ, ಹೊನ್ನಡ್ಡಿ ಸೇರಿದಂತೆ ಅನೇಕ ಗ್ರಾಮಗಳಿಗೆ ಇಂದು ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ನೌಕರಸ್ಥರು ನಿತ್ಯ ತೊಂದರೆ ಅನುಭವಿಸಬೇಕಾಗಿದೆ. ನಿತ್ಯ ನೂರಾರು ಸಂಖ್ಯೆಯಲ್ಲಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾ ಕೇಂದ್ರಕ್ಕೆ ಬಂದು ಹೋಗುತ್ತಾರೆ. ಅವರಿಗೆ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ನಂತರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು. ಸಂಘಟನೆ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾ ಘಟಕದ ಉಪಾಧ್ಯಕ್ಷ ಇಮ್ರಾನ್ ಖಾನ್ ಕಪಲಾಪುರ, ತಾಲ್ಲೂಕು ಘಟಕದ ಅಧ್ಯಕ್ಷ ಆದಿತ್ಯ ಕಾಡವಾದ, ದತ್ತು ಪಾಟೀಲ, ಸೂರಜ ಚಿದ್ರಿ, ವಿಶಾಲಕುಮಾರ ಕುದರೆ, ಫಿಲಿಪ್ ಜಾನ್, ಗೌತಮ, ಇಸಾಕ್, ಕೇದಾರನಾಥ ಪಾಟೀಲ, ವಸೀಮ್, ಸಚಿನ್ ಬಾವಿದೊಡ್ಡಿ, ಪ್ರದೀಪ ಹೊನ್ನಡ್ಡಿ, ಅಭಿಷೇಕ, ಚಿನ್ನಾ ಮಂಗಲಪೇಟ ಹಾಗೂ ಸನ್ನಿ ಕಾಡವಾದ ಇದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago