Categories: ಬೀದರ್

ಬೀದರ್: ಲಿಂಗಾಯತ ಮಹಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಿ

ಬೀದರ್: ‘ಲಿಂಗಾಯತ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆಗಾಗಿ ಹೈದರಾಬಾದ್‍ನಲ್ಲಿ ಜೂನ್ 4 ರಂದು ಹಮ್ಮಿಕೊಂಡಿರುವ ಲಿಂಗಾಯತ ಮಹಾ ರ‍್ಯಾಲಿಯಲ್ಲಿ ಜಿಲ್ಲೆಯ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಮನವಿ ಮಾಡಿದ್ದಾರೆ.

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಡೆಸುತ್ತಿರುವ ಹೋರಾಟ ಲಿಂಗಾಯತರ ಅಸ್ಮಿತೆಯ ಹೋರಾಟವಾಗಿದೆ. ಹೀಗಾಗಿ ಲಿಂಗಾಯತರು ಮಹಾ ರ‍್ಯಾಲಿಯನ್ನು ಐತಿಹಾಸಿಕಗೊಳಿಸಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆ ದೊರೆತರೆ ಲಿಂಗಾಯತರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಸಿಗಲಿವೆ. ಲಿಂಗಾಯತರ ಏಳಿಗೆಗೆ ನೆರವಾಗಲಿದೆ. ಸ್ವತಂತ್ರ ಧರ್ಮ ಮಾನ್ಯತೆ ಕೊಡುವವರೆಗೂ ಲಿಂಗಾಯತರ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

11 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

12 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

35 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

42 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

48 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

1 hour ago