Categories: ಬೀದರ್

ಬೀದರ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ – ಅಶೋಕ ಖೇಣಿ

ಬೀದರ್ : ‘ಪಕ್ಷ ಬಯಸಿದರೆ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ’ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.

ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಚಿಂತನ-ಮಂಥನ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿರುವ ಕ್ಷೇತ್ರದ ಮತದಾರರಿಗೆ ಕೃತಜ್ಞನಾಗಿರುವೆ. ಜನರ ಸೇವೆ ಮುಂದುವರಿಸುವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಸರ್ವ ಧರ್ಮೀಯರನ್ನು ಸಮನಾಗಿ ತೆಗೆದುಕೊಂಡು ಹೋಗಲಿದೆ ಎಂದು ಹೇಳಿದರು.
ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ, ಮುಖಂಡರಾದ ಬಾಬುರಾವ್ ತುಂಬಾ, ಪಂಡಿತರಾವ್ ಚಿದ್ರಿ, ತನ್ವೀರ್ ಅಹಮ್ಮದ್, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ್ ಕಮಠಾಣ, ಶಾಮರಾವ್ ಬಂಬಳಗಿ, ಅಮೃತರಾವ್ ಪಾಟೀಲ, ಸಚಿನ್ ಮಲ್ಕಾಪುರ, ರಮೇಶ ಹೌದಖಾನಿ, ಗೋವರ್ಧನ್ ರಾಠೋಡ್, ಉದಯಕುಮಾರ ಮಲಶೆಟ್ಟಿ, ಬಶೀರೊದ್ದಿನ್ ಸೌದಾಗರ್, ಲೋಕೇಶ ಮಂಗಲಗಿ, ಶಾಮರಾವ್ ಬಂಬಳಗಿ, ಖಯಾಮ್, ಗೌತಮ, ಜಯಪ್ರಕಾಶ, ಲೋಕೇಶ ಕನಶೆಟ್ಟಿ ಮೊದಲಾದವರು ಇದ್ದರು.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

5 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

29 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

55 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago