News Karnataka Kannada
Monday, April 29 2024
ಬೀದರ್

ಬೀದರ್: 1ಕೋಟಿ 5 ಲಕ್ಷ ರೂ .ಮೌಲ್ಯದ ಬೆಳ್ಳಿಯ ಆಭರಣಗಳು ಜಪ್ತಿ

Rs 1.5 crore Silver jewellery worth Rs 1,000 seized
Photo Credit : News Kannada

ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.  ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ.

ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬುವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ.

ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು