ಬೀದರ್

ಬೀದರ್‌: ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ 2 ರೂ ಸಾವಿರ ನೆರವು ಒದಗಿಸಲಾಗುವುದು – ಸಿದ್ದರಾಮಯ್ಯ

ಬೀದರ್‌: ‘ಯಾವುದೇ ಧರ್ಮ, ಜಾತಿಯ ಬಡವರಿದ್ದರೂ ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ ₹ 2 ಸಾವಿರದಂತೆ ವರ್ಷಕ್ಕೆ ₹ 24 ಸಾವಿರ ಆರ್ಥಿಕ ನೆರವು ಒದಗಿಸಲಾಗುವುದು. ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್‌ ಹಾಗೂ ಬಡವರಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ಕೊಡಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಜೋಕರ್‌ ಇದ್ದ ಹಾಗೆ. ರಸ್ತೆ, ಗಟಾರ ನಿರ್ಮಾಣಕ್ಕಿಂತ ಲವ್‌ ಜಿಹಾದ್‌ ವಿರೋಧಿಸುವುದು ಮಹತ್ವದ್ದು ಎಂದು ಈಚೆಗೆ ಹೇಳಿಕೆ ಕೊಟ್ಟಿದ್ದಾರೆ. ಜನರನ್ನು ಎತ್ತಿ ಕಟ್ಟುವುದೇ ಅವರ ಕೆಲಸವಾಗಿದೆ. ನಾಡಿನ ಅಭಿವೃದ್ಧಿ ಚಿಂತನೆ ಮಾಡದವರಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ. ದ್ವೇಷದ, ಹಿಂದುತ್ವದ, ಕೋಮುವಾದದ, ಸಮಾಜ ಒಡೆಯುವ ರಾಜಕಾರಣವೇ ಇದಕ್ಕೆ ಕಾರಣ’ ಎಂದು ಹೇಳಿದರು.

‘ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರು ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ಆದರೆ, ಸಂವಿಧಾನ ರಚನೆಯಾದ ಮೇಲೆ ಹೆಗಡೆವಾರ, ವಿ.ಡಿ. ಸಾವರಕರ್‌, ಗೋಲವಾಲ್ಕರ್ ಹಾಗೂ ಘೋಡ್ಸೆ ಅವರು ಸಂವಿಧಾನದ ವಿರುದ್ಧವಾಗಿಯೇ ಮಾತನಾಡಿದ್ದಾರೆ. ಬಿಜೆಪಿಗೆ ಇಂಥವರೇ ಆರಾಧ್ಯ ದೈವಗಳು. ಮಹಾತ್ಮರನ್ನು ಕೊಂದವರನ್ನೇ ಪೂಜೆ ಮಾಡುತ್ತಿದೆ. ಬಿಜೆಪಿಯವರು ಇವರ ವಂಶಸ್ಥರೇ ಆಗಿದ್ದಾರೆ’ ಎಂದು ಮೊಣಚಾದ ಮಾತಿನಿಂದ ಚುಚ್ಚಿದರು.

‘ಗೊಂಡ, ರಾಜಗೊಂಡ, ಕುರುಬರು, ಕೋಲಿ ಸಮಾಜದವರನ್ನು ಎಸ್‌ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಶಿಫಾರಸು ಮಾಡಿದ್ದೆ. ಆದರೆ, ಡಬಲ್‌ ಎಂಜಿನ್‌ ಸರ್ಕಾರ ಇನ್ನೂ ಅನುಮೋದನೆ ಕೊಟ್ಟಿಲ್ಲ. ನಿಮಗೆ ಸ್ವಾಭಿಮಾನ ಇದ್ದರೆ ಒಂದು ಮತವನ್ನೂ ಬಿಜೆಪಿಗೆ ಕೊಡಬೇಡಿ’ ಎಂದು ಮನವಿ ಮಾಡಿದರು.

‘ಮೋದಿ ಮಾಡುವುದೊಂದು, ಹೇಳುವುದು ಇನ್ನೊಂದು. ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್ ಎಂದು ಹೇಳುತ್ತಿದ್ದಾರೆ.

ಆದರೆ, ವಿಜಯಪುರದ ಶಾಸಕ ಬಸವರಾಜ ಪಾಟೀಲ ಯತ್ನಾಳ ಟೋಪಿ ಹಾಕಿಕೊಂಡವರು ನಮ್ಮ ಕಚೇರಿಗೆ ಬರಬೇಡಿ ಎಂದು ಹೇಳುತ್ತಾರೆ. ಬಿಜೆಪಿ ಎಂದರೆ ಸುಳ್ಳಿನ ದೊಡ್ಡ ಫ್ಯಾಕ್ಟರಿ’ ಎಂದು ಕಟುವಾಗಿ ಟೀಕಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago