ಬೀದರ್: ಎಸ್ಡಿಎ ಅಧಿಕಾರಿಯೊಬ್ಬರೂ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ನಲ್ಲಿ ನಡೆದಿದೆ.
ಹುಮನಾಬಾದ್ ತಾಲೂಕಿನ ಹುಡಗಿ ಗ್ರಾಮದ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಎಸ್ಡಿಎ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನೀಲ್ಕುಮಾರ್ ಖಾಜಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಹೆಲ್ತ್ ಇನ್ಸ್ಪೆಕ್ಟರ್ ಆಗಿರುವ ಶ್ರೀನಿವಾಸ ರೆಡ್ಡಿ ಅವರ ತುಟ್ಟಿ ಭತ್ಯೆ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿ ಬಿದ್ದಿದ್ದಾರೆ.
20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಬಳಿಕ 10 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.