Categories: ಬೀದರ್

ಬೀದರ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಡಿನ ಒಳಿತಿಗಾಗಿ ಕೆಲಸ ಮಾಡಲಿ- ಬಂಡೆಪ್ಪ ಖಾಶೆಂಪುರ್

ಬೀದರ್: ನೂತನವಾಗಿ ರಚನೆಯಾದ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್  ಶುಭ ಹಾರೈಸಿದ್ದಾರೆ.

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮತ್ತು ತಮ್ಮ ಜೀವನದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯರವರಿಗೆ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ರವರಿಗೆ ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ತಿಳಿಸಿದ್ದಾರೆ.

“ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ  ಸಿದ್ದರಾಮಯ್ಯರವರಿಗೆ ಮತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರಿಗೆ ಹಾಗೂ ಅವರೊಂದಿಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸರ್ವರಿಗೂ ಅಭಿನಂದನೆಗಳು.

“ನೂತನವಾಗಿ ರಚನೆಯಾದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಮಾಡಲಿ ಎಂದು ಈ ಮೂಲಕ ಶುಭ ಹಾರೈಸುತ್ತೇನೆ. ನೂತನ ಸರ್ಕಾರದ ಸರ್ವರಿಗೂ ಅಭಿನಂದನೆಗಳು.” ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಫೇಸ್‌ಬುಕ್‌, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆದುಕೊಂಡಿದ್ದಾರೆ.

Ashika S

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

18 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

44 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago