Categories: ಬೀದರ್

ಬೀದರ್ – ನೀರಿಗಾಗಿ ವನ್ಯಪ್ರಾಣಿಗಳ ಪರದಾಟ

ಔರಾದ್: ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.

ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.

ಇಲ್ಲಿ ಕೃಷ್ಣಮೃಗ, ನವಿಲು, ನರಿ, ಮೊಲ, ತೋಳ, ಕಾಡು ಹಂದಿ, ಮುಳ್ಳು ಹಂದಿ ಸೇರಿದಂತೆ 10 ರಿಂದ 12 ಪ್ರಭೇದದ ವನ್ಯವೀವಿಗಳಿವೆ. ಆದರೆ ಈ ಬಾರಿ ಸರಿಯಾಗಿ ಮಳೆಯಾಗದೆ ಕೆರೆ-ಕಟ್ಟೆ ಬಾವಿಗಳು ಬತ್ತಿ ಹೋದ ಪರಿಣಾಮ ವನ್ಯಪ್ರಾಣಿಗಳಿಗೆ ಆಹಾರ ಹಾಗೂ ನೀರಿನ ಕೊರತೆಯಾಗಿದೆ. ಹೀಗಾಗಿ ಅವು ಅರಣ್ಯ ಪಕ್ಕದ ಹೊಲಗಳಿಗೆ ಲಗ್ಗೆ ಇಡುತ್ತಿವೆ.

ಮಳೆ ಕೊರತೆಯಿಂದ ಮೊದಲೇ ಸಂಕಷ್ಟದಲ್ಲಿರುವ ರೈತ ಇರುವ ಅಲ್ಪ ಸ್ವಲ್ಪ ನೀರಿನಲ್ಲಿ ಬೆಳೆಸಿದ ಬೆಳೆ ವನ್ಯಪ್ರಾಣಿಗಳ ಪಾಲಾಗುತ್ತಿದೆ ಎಂದು ರೈತ ಸಂತೋಷ ಮಸ್ಕಲೆ ಕಳವಳ ವ್ಯಕ್ತಪಡಿಸಿದ್ದಾರೆ.

ವನ್ಯ ಪ್ರಾಣಿಗಳಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಆಗುವುದು ಸಹಜ. ಆದರೆ ಈ ಬಾರಿ ಸಮಸ್ಯೆ ಹೆಚ್ಚಿದೆ. ವನ್ಯಪ್ರಾಣಿಗಳಿರುವ ತಾಲ್ಲೂಕಿನ ಏಳು ಕಡೆ ಅರಣ್ಯ ಪ್ರದೇಶದಲ್ಲಿ ಕುಡಿಯಲು ನೀರಿಗಾಗಿ ಹೊಂಡದ ವ್ಯವಸ್ಥೆ ಮಾಡಿದ್ದೇವೆ. ಆದರೆ ತುಂಬಿದ 2-3 ದಿನದಲ್ಲೇ ಹೊಂಡಗಳು ಖಾಲಿಯಾಗುತ್ತಿವೆ ಎಂದು ಉಪವಲಯ ಅರಣ್ಯಾಧಿಕಾರಿ ಅಂಕುಶ ಮಚಕುರಿ ಹೇಳುತ್ತಾರೆ.

ಈ ಬಾರಿ ಮಳೆ ಕೊರತೆ ಆದ ಕಾರಣ ವನ್ಯಪ್ರಾಣಿಗಳಿಗೆ ತಿನ್ನಲು ಸರಿಯಾಗಿ ಆಹಾರವೂ ಸಿಗುತ್ತಿಲ್ಲ. ತಾಪಮಾನವೂ ಜಾಸ್ತಿ ಆಗುತ್ತಿರುವುದರಿಂದ ಆಗಾಗ ಅವು ಹೊರಗೆ ಬರುತ್ತಿವೆ. ಅವುಗಳಿಂದ ಕೆಲವೆಡೆ ರೈತರಿಗೆ ಸಮಸ್ಯೆಯಾಗುತ್ತಿದೆ. ಅಂತಹ ರೈತರಿಗೆ ಇಲಾಖೆಯಲ್ಲಿ ಪರಿಹಾರ ಕೊಡಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ತಾಲ್ಲೂಕಿನಲ್ಲಿ ನವಿಲು, ಕೃಷ್ಣ ಮೃಗ ಸೇರಿದಂತೆ ವನ್ಯಪ್ರಾಣಿ ಸಂತತಿ ಜಾಸ್ತಿ ಇದೆ. ಸೂಕ್ತ ಸಂರಕ್ಷಣೆ ವ್ಯವಸ್ಥೆ ಇಲ್ಲ. ಸರ್ಕಾರ ಇಲ್ಲಿ ವನ್ಯ ಜೀವಿಗಳ ಧಾಮ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅನೀಲ ಜಿರೋಬೆ ಆಗ್ರಹಿಸಿದ್ದಾರೆ.

ನಮ್ಮ ತಾಲ್ಲೂಕಿನಲ್ಲಿ 26ಕ್ಕೂ ಅಧಿಕ ಕೆರೆಗಳಿವೆ. ಆದರೆ ಈ ಕೆರೆಗಳ ಸೂಕ್ತ ನಿರ್ವಹಣೆ ಇಲ್ಲದೆ ಹಾಳಾಗಿವೆ. ಇದರಿಂದ ನೀರಿನ ಕೊರತೆಯಾಗಿ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಪತ್ತು ಬರುತ್ತಿದೆʼ ಎಂದು ಪಕ್ಷಿ ಪ್ರೇಮಿ ರಿಯಾಜ್ಪಾಶಾ ಕೊಳ್ಳೂರ್ ಕಳವಳ ವ್ಯಕ್ತಪಡಿಸಿದರು.

Chaitra Kulal

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago