Categories: ಬೀದರ್

ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಬಿಜೆಪಿಯ ಶಿವಕುಮಾರ್ ದೇಶಪಾಂಡೆ, ರವಿ ವಾಡೇದ್

ಬೀದರ್ (ಮಾ‌.01): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಮುಖಂಡರಾಗಿದ್ದ ಬಂಬಳಗಿಯ ಶಿವಕುಮಾರ್ ದೇಶಪಾಂಡೆ, ಮನ್ನಾಎಖೇಳ್ಳಿಯ ರವಿ ವಾಡೇದ್ ರವರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಬುಧವಾರ ಮಧ್ಯಾಹ್ನ ಜೆಡಿಎಸ್ ಶಾಲು , ಪಕ್ಷದಹೊದಿಸಿ ಧ್ವಜ ನೀಡುವ ಮೂಲಕ ಬಿಜೆಪಿಯ ಪ್ರಮುಖರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಶಿವಕುಮಾರ್ ದೇಶಪಾಂಡೆ, ರವಿ ವಾಡೇದ್ ರವರು ಜೆಡಿಎಸ್ ಪಕ್ಷಕ್ಕೆ ಬಂದಿರುವುದು ಸಂತಸದ ವಿಷಯವಾಗಿದೆ. ಎಲ್ಲರೂ ಸೇರಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ, ನಮ್ಮ ಗುರಿಗಳ ಬಗ್ಗೆ, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಾವು ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡುವ ಕೆಲಸ ಎಲ್ಲರೂ ಸೇರಿ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಮಹೇಶ್ ಚಿಂತಾಮಣಿ, ಗಣಪತಿ ಶಂಭು ಕಂಗನಕೋಟ್, ಅನಿಲ್ ಕುಮಾರ್ ಮಜ್ಜಿಗೆ ಸೇರಿದಂತೆ ಅನೇಕರಿದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago