News Karnataka Kannada
Friday, May 10 2024
ಬೀದರ್

ಬೀದರ್‌: ಬಸ್‌ – ಬೈಕ್‌ ಮಧ್ಯೆ ಅಪಘಾತ; ಗ್ರಾ.ಪಂ. ಸದಸ್ಯ ಸೇರಿ ಇಬ್ಬರು ಸಾವು

ವೃದ್ಧೆಯೊಬ್ಬರು ಮೊಬೈಲ್‌ನಲ್ಲಿ ಮಾತನಾಡಿಕೊಂಡು ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ  ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
Photo Credit : News Kannada

ಬೀದರ್‌: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದ ಅಪಘಾತದಲ್ಲಿ ಡಿಗ್ಗಿ ಗ್ರಾಮ ಪಂಚಾಯಿತಿ ಸದಸ್ಯ ವೀರೇಶ ಕಲ್ಲಪ್ಪಾ ಲೋಹರೆ (34) ಹಾಗೂ ಅಭಿಷೇಕ್ ವೀರೇಂದ್ರ ಧಬಾಲೆ (25) ಮೃತಪಟ್ಟವರು.

ಉದಗೀರ್ ಪಟ್ಟಣದಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಎದುರಿನಿಂದ‌ ಬಂದ ಸಾರಿಗೆ ಸಂಸ್ಥೆಯ ಬಸ್‌ಗೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ ಗಣೇಶ ಸತೀಶ ಭಾಡಸಿಂಗೆ ಎಂಬುವರಿಗೆ ಕಮಲನಗರ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಗುರುನಾನಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ಡಿವೈಎಸ್ ಶಿವಾನಂದ್ ಪವಾಡಶೆಟ್ಟಿ ಹಾಗೂ ಕಮಾಲನಗರ ಪಿಎಸ್‌ಐ ಆಶಾ ರಾಥೋಡ್ ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಕಮಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು