ಬೀದರ್: ಇಚರ್ ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 14.26 ಲಕ್ಷ ರೂಪಾಯಿ ನಗದು ಸಹಿತ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್ ನ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಲೋಕಸಭೆ ಚುನಾವಣೆ ಸುಮೀಪಿಸುತ್ತಿರುವ ನಿಟ್ಟಿನಲ್ಲಿ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು.
ಈ ವೇಳೆ ಬಸವಕಲ್ಯಾಣದಿಂದ ಮಹಾರಾಷ್ಟ್ರದ ಲಾತೂರ್ಗೆ ತೆರಳುತ್ತಿದ್ದ ಇಚರ್ ಗೂಡ್ಸ್ ವಾಹನದಲ್ಲಿ 5.26 ಲಕ್ಷ ರೂಪಾಯಿ ಮೌಲ್ಯದ ಆರ್ಎಮ್ಡಿ, ವಿಮಲ್ ಪಾನ್ ಮಸಾಲಾ ಮತ್ತು ತಂಬಾಕು ಇದರ ಜೊತೆಗೆ 14.26 ಲಕ್ಷ ನಗದನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ವಾಹನ ಸೇರಿ ಒಟ್ಟು 31 ಲಕ್ಷ 53 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಈ ಬಗ್ಗೆ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…