Categories: ಬೀದರ್

ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚಂದ್ರಾಸಿಂಗ ಅಬ್ಬರದ ಪ್ರಚಾರ

ಬೀದರ್:  ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ ಅವರು ಶನಿವಾರ ಕ್ಷೇತ್ರದ ವಿವಿಧೆಡೆ ಸಂಚರಿಸಿ ಅಬ್ಬರದ ಪ್ರಚಾರ ನಡೆಸಿದರು. ಬೀದರ ದಕ್ಷಿಣ ವಿಧಾಣಸಭಾ ಕ್ಷೇತ್ರದ ಸಿರ್ಸಿ ಎ, ಖಾಷೆಂಪುರ ಸಿ. ಭೈರನ್ನಳ್ಳಿ. ನಿಡವಂಚಾ. ಮರಕುಂದಾ ಸೇರಿದಂತೆ ಅನೇಕ ಗ್ರಾಮಗಳಿಗೆ ಭೇಟಿ ಮಾಡಿ. ಮತದಾರರಿಗೆ ಕ್ರಮ ಸಂಖ್ಯೆ 9ರ ವಿದ್ಯುತ್ ಕಂಬಕ್ಕೆ ಮತ ನೀಡುವಂತೆ ಕೋರಿದರು.

ಹೋದ ಕಡೆಗಳಲ್ಲಿ ಸಂಭ್ರಮದಿಂದ ಬರಮಾಡಿಕೊಂಡ ಅಭಿಮಾನಿಗಳು. ಕಾರ್ಯಕರ್ತರು, ಹಿತೈಷಿಗಳು ಸ್ವಾಗತಿಸಿದರು. ಕಾಂಗ್ರೆಸ ಪಕ್ಷವು ನಿಮಗೆ ಟಿಕೆಟ್ ನೀಡುತ್ತೇನೆ ಎಂದು ಹೇಳಿ ಮೋಸ ಮಾಡಿದೆ. ಆದ್ದರಿಂದ ಇಡೀ ಕ್ಷೇತ್ರದ ಜನರು ನಾವೆಲ್ಲರು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಗೆಲುವು ಖಂಡಿತ ಕಟ್ಟಿಟ್ಟ ಬುತ್ತಿ ಎಂದು ಮತದಾರರು ಚಂದ್ರಾಸಿಂಗ ಅವರಿಗೆ ಭರವಸೆ ನೀಡಿದರು.
ಇದೇ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಯುವ ನಾಯಕ ಚಂದ್ರಸಿಂಗ ಅವರು. ನಾನು ಕ್ಷೇತ್ರದ ಅಭಿವೃದ್ಧಿಯ ಕನಸುಗಳನ್ನು ಕಂಡಿದ್ದೇನೆ. ಯಾವುದೇ ಫಲಾಪೇಕ್ಷೆ ಇಲ್ಲದೆ 12 ವರ್ಷಗಳಿಂದ ಕ್ಷೇತ್ರದ ಜನರ ಸೇವೆಯಲ್ಲಿದ್ದೇನೆ. ಕ್ಷೇತ್ರ ಅಭಿವೃದ್ಧಿ ಮಾಡಬೇಕು ಎಂದು ಒಂದೇ ಉದ್ದೇಶಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಕ್ಷೇತ್ರ ಜನರು ನನ್ನ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಸಿರ್ಸಿ (ಎ), ಖಾಸೆಂಪೂರ ಸಿ, ಭೈರನ್ನಳ್ಳಿ, ನಿಡವಂಚಾ ಮತ್ತು ಮರಕುಂದ ಗ್ರಾಮದಲ್ಲಿ ಚಂದ್ರಸಿಂಗ್ ರವರು ಚುನಾವಣಾ ಪ್ರಚಾರ ನಡೆಸಿ. ಮತಯಾಚನರ ಮಾಡಿದರು. ಈ ಸಂರ್ಭದಲ್ಲಿ ಅಪರವಾದ ಅಭಿಮಾನಿಗಳು, ಕಾರ್ಯಕರ್ತರು, ಗ್ರಾಮ ಪಂಚಾಯತ ಸದಸ್ಯರು, ಹಿರಿಯ ಮುಖಂಡರು, ಯುವ ನಾಯಕರು, ಮಹಿಳೆಯರು ಸೇರಿದಂತೆ ನೂರಾರು ಜನಸೇರಿ ಬ್ರಹತ್  ಬೆಂಬಲ ಸೂಚಿಸಿದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

1 hour ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

1 hour ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

2 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

2 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

2 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago