News Karnataka Kannada
Saturday, May 11 2024
ಬೀದರ್

ಬಾಲ್ಯ ವಿವಾಹ ದುಷ್ಪರಿಣಾಮ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮಗಳಿಗೆ ಬಾಲ್ಯವಿವಾಹ ಮಾಡಿಸುವುದು ಬೇಡ ಎಂದ ಪತ್ನಿಯ ಕಾಲನ್ನು ಪತಿ ಮುರಿದಿದ್ದಾನೆ.
Photo Credit : News Kannada

ಬೀದರ್, ಮಾ,29: ಬಾಲ್ಯವಿವಾಹ ತಡೆಗಾಗಿ, ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಲು ಹಾಗೂ ಬಾಲ್ಯವಿವಾಹ ನಿಷೇಧಾಧಿಕಾರಿಗಳ ಸಮಿತಿಯು ಹೆಚ್ಚು ಕಾರ್ಯ ಪ್ರವೃತ್ತರಾಗಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಬಾಲ್ಯವಿವಾಹಗಳನ್ನು ಜರುಗದಂತೆ ಕ್ರಮವಹಿಸಲು ಸಮಿತಿ ಸಭೆಗಳನ್ನು ನಡೆಸುವುದು ಹಾಗೂ ಸಮಿತಿಯಲ್ಲಿ ಕೈಗೊಂಡ ನಿರ್ಣಯದಂತೆ ಆಯಾ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಪೂರ್ಣ ಬೆಳವಣಿಗೆಗೆ ಅಧಿಕ ಒತ್ತನ್ನು ನೀಡಲು ಹಾಗೂ ಬಾಲ್ಯವಿವಾಹಗಳನ್ನು ತಡೆಯಲು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಸೂಚಿಸಿರುತ್ತಾರೆ.

ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದ್ದು, ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯವಾಗಿರುತ್ತದೆ. ಬಾಲ್ಯ ವಿವಾಹವೆಂದರೆ 18ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹವೆಂದು ಪರಿಗಣಿಸಲಾಗುತ್ತದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿಯು ತಾಯಂದಿರ ಮರಣ, ಶಿಶು ಮರಣ, ಅಪೌಷ್ಠಿಕತೆಯನ್ನು ಉಂಟು ಮಾಡುವುದಲ್ಲದೇ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಉಂಟು ಮಾಡುತ್ತದೆ.

ಈ ಎಲ್ಲಾ ಕಾರಣಗಳಿಂದಾಗಿ ಬಾಲ್ಯವಿವಾಹವೆಂಬ ಅನಿಷ್ಠ ಪದ್ಧತಿ ಹಾಗೂ ಸಾಮಾಜಿಕ ಪಿಡುಗು ಎಂದು ಗುರುತಿಸಿ, ಇದನ್ನು ನಿಷೇಧಿಸಲು ಕೇಂದ್ರ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಗೆ ತಂದಿರುತ್ತದೆ. ಸದರಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ, ಜಿಲ್ಲಾ, ತಾಲ್ಲೂಕಾ, ಗ್ರಾಮ ಪಂಚಾಯತಿ, ಗ್ರಾಮ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನು ನೇಮಿಸಲಾಗಿರುತ್ತದೆ (ಮಾಹಿತಿಯನ್ನು ಲಗತ್ತಿಸಲಾಗಿದೆ).

ಅದೇ ರೀತಿ ಈ ಕಾರ್ಯವು ಕೇವಲ ಸರ್ಕಾರಿ ಇಲಾಖೆ, ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿರುತ್ತದೆ. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಪ್ರಕಾರ ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ 18 ವರ್ಷದೊಳಗಿನ ಹೆಣ್ಣು ಮಗುವನ್ನು ಮದುವೆಯಾದ ವಯಸ್ಕ ವ್ಯಕ್ತಿ, ಮದುವೆ ಮಾಡುವ ಪಾಲಕರು-ಪೋಷಕರು, ಇಂತಹ ಮದುವೆಯಲ್ಲಿ ಭಾಗವಹಿಸುವವರು, ಬಾಲ್ಯವಿವಾಹವನ್ನು ಏರ್ಪಡಿಸುವ, ನಿರ್ದೇಶಿಸುವ, ನೆರವೇರಿಸುವ ಮತ್ತು ಮದುವೆಗೆ ಕುಮ್ಮಕ್ಕು ನೀಡುವ ಸಂಸ್ಥೆ, ವ್ಯಕ್ತಿ, ಕಾಯ್ದೆಯಡಿ ನೀಡಿದ ತಡೆಯಾಜ್ಞೆಯನ್ನು ಉಲ್ಲಂಘಿಸಿದವರು, ಮಗುವಿನ ಜವಾಬ್ದಾರಿಯನ್ನು ಹೊತ್ತ ಯಾವುದೇ ವ್ಯಕ್ತಿ,ಸಂಸ್ಥೆಯ ನಿರ್ಲಕ್ಷ್ಯತೆಯಿಂದ ಬಾಲ್ಯವಿವಾಹವನ್ನು ತಡೆಯಲು ವಿಫಲರಾದವರು ಸಹ ತಪ್ಪಿತಸ್ಥರು. ಇವರುಗಳಿಗೆ ಕಾಯ್ದೆ ಪ್ರಕಾರ “ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ” ಅಥವಾ “ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವೆರಡರಿಂದಲೂ ಶಿಕ್ಷೆಗೆ ಗುರಿಯಾಗತಕ್ಕದು”್ದ, ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡುವ ಅವಕಾಶವಿರುತ್ತದೆ.

ಪ್ರಯುಕ್ತ ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಡಿ ಸಾಮೂಹಿಕ ವಿವಾಹದಲ್ಲಾಗಲೀ ಅಥವಾ ವೈಯಕ್ತಿಕ ವಿವಾಹದಲ್ಲಾಗಲೀ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸತಕ್ಕದ್ದು, ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ 08482-234003 ಅವರ ಗಮನಕ್ಕೆ ತುರ್ತಾಗಿ ತರಲು ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು