ಬೀದರ್: ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ (ಏ.24) ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
ಸಂಜೆ 5.30ಕ್ಕೆ ನಗರದ ಗಣೇಶ ಮೈದಾನದಲ್ಲಿ ಬಹಿರಂಗ ಪ್ರಚಾರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕರ್ತರು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಕಾರ್ಯಕ್ರಮಕ್ಕೆ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಂಗಳವಾರ ಮಾಹಿತಿ ಹಂಚಿಕೊಂಡಿದ್ದಾರೆ.