News Karnataka Kannada
Friday, April 12 2024
Cricket
ಬೀದರ್

ಬೀದರ್: ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಆಗ್ರಹ

ಮುಂಬರುವ ಲೋಕಸಭೆ ಚುನಾವಣೆಗೆ ಬೀದರ್‌ ಕ್ಷೇತ್ರದಿಂದ ಮುಖಂಡ ಅಯಾಜ್‌ ಖಾನ್‌ ಅವರಿಗೆ ಟಿಕೆಟ್‌ ಕೊಡಬೇಕು. ಅವರಿಗೆ ಟಿಕೆಟ್‌ ಕೊಟ್ಟರೆ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಕೊನೆಗೊಳ್ಳಲಿದೆ' ಎಂದು ಅಯಾಜ್‌ ಖಾನ್‌ ಬೆಂಬಲಿಗರು ಹೇಳಿದರು.
Photo Credit : News Kannada

ಬೀದರ್ : ಮುಂಬರುವ ಲೋಕಸಭೆ ಚುನಾವಣೆಗೆ ಬೀದರ್‌ ಕ್ಷೇತ್ರದಿಂದ ಮುಖಂಡ ಅಯಾಜ್‌ ಖಾನ್‌ ಅವರಿಗೆ ಟಿಕೆಟ್‌ ಕೊಡಬೇಕು. ಅವರಿಗೆ ಟಿಕೆಟ್‌ ಕೊಟ್ಟರೆ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಕೊನೆಗೊಳ್ಳಲಿದೆ’ ಎಂದು ಅಯಾಜ್‌ ಖಾನ್‌ ಬೆಂಬಲಿಗರು ಹೇಳಿದರು.

ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಖಾನ್‌ ಬೆಂಬಲಿಗರೂ ಹಾಗೂ ಮಾನವ ಹಕ್ಕುಗಳ ಒಕ್ಕೂಟದ ಅಧ್ಯಕ್ಷ ವಹೀದ್‌ ಲಖನ್‌, ರಾಜಕುಮಾರ ಗುನ್ನಳ್ಳಿ, ಚಂದ್ರಕಾಂತ ನಿರೋಟೆ, ಏಸುದಾಸ್‌ ಆಣದೂರೆ, ಜಯರಾಜ ದೊಡ್ಡಮನಿ, ಸಂದೀಪ ಒತ್ತಾಯಿಸಿದರು.

52 ವರ್ಷಗಳ ಹಿಂದೆ ಮುಸ್ಲಿಮ್‌ ಸಮುದಾಯದವರಿಗೆ ಅಲ್ಪಸಂಖ್ಯಾತರ ಕೋಟಾದಡಿ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿತ್ತು. ಅದಾದ ಬಳಿಕ ನೀಡಿಲ್ಲ. ಜಿಲ್ಲೆಯಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದ್ದರೂ ಕಡೆಗಣಿಸಲಾಗಿದೆ. ಎಲ್ಲಾ ಜಾತಿ, ಜನಾಂಗ, ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವ ಸಾಮರ್ಥ್ಯ ಅಯಾಜ್‌ ಖಾನ್‌ ಅವರಲ್ಲಿದ್ದು, ಅವರ ಹೆಸರು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿಯಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾನೂನು ಸುವ್ಯವಸ್ಥೆ ಬಿಗಡಾಯಿಸಿದೆ. ಧರ್ಮ-ಧರ್ಮಗಳ ಮಧ್ಯೆ, ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತಿ ದೇಶವನ್ನು ಒಡೆಯಲು ಹೊರಟಿರುವ ಬಿಜೆಪಿಯನ್ನು ಕಟ್ಟಿ ಹಾಕುವ ಅಗತ್ಯವಿದೆ. ಅಯಾಜ್‌ ಖಾನ್‌ ಅವರಿಗೆ ಟಿಕೆಟ್‌ ಕೊಟ್ಟರೆ ಪ್ರಚಂಡ ಬಹುಮತದಿಂದ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು