News Karnataka Kannada
Friday, April 12 2024
Cricket
ಬೀದರ್

ಸಂವಿಧಾನ ಜಾಗೃತಿ ಜಾಥಾದಲ್ಲಿ ದಾಂದಲೆ: 11 ಜನರ ವಿರುದ್ಧ ಪ್ರಕರಣ, ಇಬ್ಬರ ಬಂಧನ

ಭಾಲ್ಕಿ ತಾಲ್ಲೂಕಿನ ಮಳಚಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಾಂದಲೆ ಮಾಡಿ, ಕಲ್ಲು ತೂರಾಟ ನಡೆಸಿದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Photo Credit : IANS

ಬೀದರ್: ಭಾಲ್ಕಿ ತಾಲ್ಲೂಕಿನ ಮಳಚಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಾಂದಲೆ ಮಾಡಿ, ಕಲ್ಲು ತೂರಾಟ ನಡೆಸಿದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಿಂದ ಶುಕ್ರವಾರ (ಫೆ.9) ಮಳಚಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಕೆಲ ಕಿಡಿಗೇಡಿ ಯುವಕರು ಗುಂಪುಗೂಡಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಮಾಡಿದ್ದಾರೆ.

‘ಮಂದಿರ ಬನಾಯೆಂಗೆ’ ಹಾಡು ಹಾಕಿ ಎಂದು ಆಯೋಜಕರನ್ನು ಬಲವಂತ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ತಿಳಿ ಹೇಳಿ ಕಳಿಸಿದ್ದಾರೆ. ಬಳಿಕ ಯುವಕರ ಗುಂಪು ಉದ್ದುದ್ದ ಧ್ವಜಗಳೊಂದಿಗೆ ಬಂದು, ಕುಣಿದು ದಾಂದಲೆ ಮಾಡಿದ್ದಾರೆ. 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ವಿಶಾಲ ಜಗನ್ನಾಥ ಮಡಿವಾಳ, ವಿಷ್ಣು ವೀರಶೆಟ್ಟಿ ಹಡಪದ ಬಂಧಿತ ಯುವಕರು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು