News Karnataka Kannada
Thursday, May 02 2024
ಬೀದರ್

ಭಾರತ ಸಂವಿಧಾನದ ವಿಶ್ವದಲ್ಲೇ ಶ್ರೇಷ್ಠ: ಶಾಸಕ ಪ್ರಭು ಚವ್ಹಾಣ

ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಕಲ್ಪಿಸಿರುವ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
Photo Credit : News Kannada

ಔರಾದ: ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಕಲ್ಪಿಸಿರುವ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.

ಔರಾದ(ಬಿ) ತಾಲ್ಲೂಕು ಆಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಔರಾದ(ಬಿ) ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಜನವರಿ 26ರಂದು ಜರುಗಿದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಧರ್ಮದವರು ವಾಸಿಸುವ ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯಿರುವುದು ವಿಶೇಷತೆಯಾಗಿದೆ. ಸಂವಿಧಾನವು ದೇಶದ ಎಲ್ಲ ನಾಗರಿಕರಿಗೂ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒದಗಿಸಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ಎಲ್ಲ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ಉತ್ತಮವಾದ ಸಂವಿಧಾನವನ್ನು ರಚಿಸಿದ್ದಾರೆ. ನಮ್ಮ ಸಂವಿಧಾನದ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕೆಂದರು.

ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಕ್ಷೇತ್ರದಲ್ಲಿ ನೀರಿನ ಕೊರತೆ ನೀಗಿಸುವುದು ಮತ್ತು ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೆರೆ ತುಂಬಿಸುವ ಯೋಜನೆಗೆ ಮಂಜೂರಾತಿ ಪಡೆಯಲಾಗಿದೆ. 13 ಕೋಟಿ ವೆಚ್ಚದ ಸುಸಜ್ಜಿತ ಕೋರ್ಟ್ ಕಾಂಪ್ಲೆಕ್ಸ್ ನಿರ್ಮಿಸುವುದು, ಕಾರಂಜಾ ಜಲಾಶಯದಿಂದ ಔರಾದ(ಬಿ) ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ 84 ಕೋಟಿ ವೆಚ್ಚದ ಯೋಜನೆಗೆ ಮಂಜೂರಾತಿ ಪಡೆದಿದ್ದು, ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರದಲ್ಲೇ ಕೆಲಸಗಳನ್ನು ಆರಂಭಿಸಲಾಗುತ್ತದೆ ಎಂದರು.

ಹೊರಂಡಿ, ಚಿಂತಾಕಿ ಹಾಗೂ ಬಲ್ಲೂರನಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ 73 ಕೋಟಿಯ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಕೆಲಸಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. ಔರಾದ್‌ನಲ್ಲಿ ಉದ್ಯಾನವನ ನಿರ್ಮಾಣವಾಗುತ್ತಿದೆ. ಎಲ್ಲ ಗ್ರಾಮಗಳಿಗೆ ರಸ್ತೆ ಸಂಪರ್ಕ, ವಿದ್ಯುತ್, ಕುಡಿಯುವ ನೀರು ಸರಬರಾಜು ಸೇರಿದಂತೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಸರ್ಕಾರದ ಮೇಲೆ ಒತ್ತಡ ತಂದು ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಅನುದಾನ ಬಿಡುಗಡೆಯಾದ ನಂತರ ಕೆಲಸಗಳನ್ನು ಆರಂಭಿಸಲಾಗುತ್ತದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆಂದು ತಿಳಿಸಿದರು.

ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ತೋರ್ಣಾ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರವಿಕುಮಾರ ವರೂರ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರಾದ ದೊಂಡಿಬಾ ನರೋಟೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಔರಾದ(ಬಿ) ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಎಇಇ ವೆಂಕಟರಾವ ಶಿಂಧೆ, ಲೋಕೋಪಯೋಗಿ ಇಲಾಖೆಯ ಎಇಇ ವೀರಶೆಟ್ಟಿ ರಾಠೋಡ್ ಸೇರಿದಂತೆ ಇತರರಿದ್ದರು. ಸಾಹಿತಿಗಳು ಹಾಗೂ ಔರಾದ(ಬಿ) ಉಪ ಖಜಾನಾಧಿಕಾರಿ ಮಾಣಿಕರಾವ ನೇಳಗೆ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆಯ ನಿಮಿತ್ತ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.

ಬಿಜೆಪಿ ಕಛೇರಿಯಲ್ಲಿ ಗಣರಾಜ್ಯೋತ್ಸವ: ಔರಾದ(ಬಿ) ಬಿಜೆಪಿ ಮಂಡಲದ ವತಿಯಿಂದ ಕಛೇರಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಪ್ರಭು.ಬಿ ಚವ್ಹಾಣ, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು