News Karnataka Kannada
Tuesday, April 23 2024
Cricket
ಬೀದರ್

ಬೀದರ್​: ಕಾರಂಜಾ ಜಲಾಶಯ ನಿರ್ಮಾಣದಿಂದ ಭೂಮಿ ಕಳೆದುಕೊಂಡ ರೈತರಿಗೆ 4 ದಶಕ ಕಳೆದರೂ ಸಿಗದ ಪರಿಹಾರ

ಕಾರಂಜಾ ಜಲಾಶಯ ನಿರ್ಮಾಣದಿಂದ ಭೂಮಿ ಕಳೆದುಕೊಂಡ ರೈತರಿಗೆ 4 ದಶಕ ಕಳೆದರೂ ಸಿಗದ ಪರಿಹಾರ
Photo Credit : News Kannada

ಬೀದರ್​: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಬೀದರ್​ ಜಿಲ್ಲೆಯ ಅನ್ನದಾತರು ಕಳೆದ ನಾಲ್ಕು ದಶಕಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಮಳೆ, ಚಳಿ, ಬಿಸಿಲು ಲೆಕ್ಕಸಿದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಪ್ರತಿಭಟನೆ ನಡೆಸುತ್ತಿರುವ ನೇಗಿಲ ಯೋಗಿಯ ಸಮಸ್ಯೆ ಕೇಳಲು ಯಾರು ಬರುತ್ತಿಲ್ಲ. ಇದು ಸಹಜವಾಗಿಯೇ ರೈತರ ಆಕ್ರೋಶ ಹೆಚ್ಚಿಸುವಂತೆ ಮಾಡಿದ್ದು, ಉಗ್ರ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ. ಅಷ್ಟಕ್ಕೂ ಈ ರೈತರು ಪ್ರತಿಭಟನೆ ಮಾಡುತ್ತಿರುವುದು ಏಕೆ? ಈ ಸ್ಟೋರಿ ಓದಿ.

ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಡ್ಯಾಂ ನಿರ್ಮಾಣದ ವೇಳೆ ಸುಮಾರು 26 ಹಳ್ಳಿಯ ರೈತರು ತಮ್ಮ ಫಲವತ್ತಾದ ಜಮೀನನ್ನು ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡ ರೈತರು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ ನಾಲ್ಕು ದಶಕಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೂ ಇತ್ತೀಚಿಗೆ ಕಳೆದ ಎಂಟು ತಿಂಗಳಿಂದ ಮಾನವ ಸರಪಳಿ, ಕೇಶ ಮುಂಡನ, ಉರುಳು ಸೇವೆ ಹೀಗೆ ನಾನಾ ರೀತಿಯಲ್ಲಿ ಪ್ರತಿಭಟನೆ ಮಾಡಿದರು ಕೂಡ ಜಿಲ್ಲೆಯ ರಾಜಕಾರಣಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇದು ಸಹಜವಾಗಿ ರೈತರನ್ನು ಕೆರಳುವಂತೆ ಮಾಡಿದೆ.

ಬೀದರ್, ಭಾಲ್ಕಿ, ಔರಾದ್, ಹುಮ್ಮಾಬಾದ್ ತಾಲೂಕುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 1972 ರಲ್ಲಿ ಬೀದರ್ ಬಳಿ ಕಾರಂಜಾ ಜಲಾಶಯವನ್ನ ನಿರ್ಮಿಸಲಾಯಿತು. ಜಲಾಶಯ ನಿರ್ಮಾಣದಿಂದಾಗಿ 9 ಹಳ್ಳಿಗಳು ಮುಳುಗಡೆಯಾಗಿ 10 ಸಾವಿರ ಕುಟುಂಬಗಳು ಬೀದಿಗೆ ಬಿದ್ದುವು. 26 ಗ್ರಾಮಗಳ 18 ಸಾವಿರ ಎಕರೆ ಭೂಮಿ ನೀರಿನಲ್ಲಿ ಮುಳುಗಿ ಹೋಗಿದೆ. ಇಷ್ಟೆಲ್ಲ ನಷ್ಟವಾದರೂ ಸರಕಾರ ಮಾತ್ರ ಇನ್ನೂವರೆಗೂ ರೈತರಿಗೆ ಕೊಡಬೇಕಾದ ಪರಿಹಾರವನ್ನು ಕೊಟ್ಟಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕಳೆದ ಐದು ದಶಕದಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರು ನ್ಯಾಯಯುತವಾಗಿ ರೈತರಿಗೆ ಸಿಗಬೇಕಿದ್ದ ಪರಿಹಾರ ಮಾತ್ರ ಸಿಗುತ್ತಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು