Categories: ಬೀದರ್

ವಾಕಥಾನ್ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ್: ಜಿಲ್ಲಾಡಳಿತ, ಜಿಲ್ಲಾ ಸ್ಚೀಫ್ ಸಮಿತಿ ಬೀದರ ವತಿಯಿಂದ ಮಾರ್ಚ್ 29 ರಂದು ಬೀದರ ನಗರದಲ್ಲಿ ಮತದಾನ ಜಾಗೃತಿ ಕುರಿತು ವಾಕಥಾನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ- 2024 ರ ಅಂಗವಾಗಿ ಮತದಾನ ಜಾಗೃತಿ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಾರ್ಚ್. 29 ರಂದು ಶುಕ್ರವಾರ ಬೆಳಿಗ್ಗೆ 6:30 ಗಂಟೆಗೆ ಬರೀದಶಾಹಿ ಗಾರ್ಡನದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ವಾಕಥಾನ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ-ತಮ್ಮ ಇಲಾಖೆಯ ಬ್ಯಾನರಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಇದರ ಉದ್ದೇಶ ಜನರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವದಾಗಿದೆ ಎಂದು ಹೇಳಿದರು.

ಈಗ ಶಾಲಾ ಮಕ್ಕಳ ಪರೀಕ್ಷೆಗಳು ನಡೆಯುತ್ತಿರುವುದರಿಂದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವದು ಬೇಡ. ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದರಲ್ಲಿ ಭಾಗವಹಿಸುವವರು ಬಿಳಿ ಟೀ ಶರ್ಟಗಳನ್ನು ಧರಿಸಿಕೊಂಡು ಬರಬೇಕು. ವಾಕಥಾನ್ ನಂತರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಸ್ವೀಫ್ ಕ್ರಿಕೆಟ್ ಟೂರ್ನಮೆಂಟ್, ಸ್ವೀಫ್ ಲೋಗೊ ಪ್ರದರ್ಶನ ಇರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಮಾತನಾಡಿ, ವಾಕಥಾನ್ ಕಾರ್ಯಕ್ರಮದಲ್ಲಿ ಎರಡರಿಂದ ಮೂರು ಸಾವಿರ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಬೇಕು. ಜನರು ತಪ್ಪದೆ ಮತದಾನ ಮಾಡುವಂತೆ ಅವರಿಗೆ ತಿಳಿಹೇಳಬೇಕು ಮತ್ತು ಮೇ. 29 ರಂದು ನಡೆಯುವ ವಾಕಥಾನ ಕಾರ್ಯಕ್ರಮದಲ್ಲಿ ಎಲ್ಲಾ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಬೇಕೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ಕಳೆದ ಸಲಕ್ಕಿಂತ ಈ ಸಲ ಹೆಚ್ಚಿನ ಮತದಾನವಾಗಲು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ರಿಟಿಕಲ್ ಮತ್ತು ವಲ್ನರೆಬಲ್ ಪೋಲಿಂಗ್ ಭೂತಗಳಲ್ಲಿ ಹೆಚ್ಚಿನ ಮತದಾನ ಆಗಲು ನಮ್ಮ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸ್ವೀಫ್ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಗೌತಮ ಅರಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಸಿಂಧು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾಂತ್ ಶಾಬಾದಕರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Maithri S

Recent Posts

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

3 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

15 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

34 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

35 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

50 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago