Categories: ಬೀದರ್

ಬಾಲ್ಯ ವಿವಾಹ ನಡೆಯದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ್: ಬೇಸಿಗೆ ಇರುವುದರಿಂದ ಈಗ ಮದುವೆ ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯುತ್ತವೆ. ಹೀಗಿರುವಾಗ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.

ಅವರು ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಬಾಲ್ಯವಿವಾಹ ನಡೆಯುತ್ತಿದೆ ಎಂಬ ದೂರು ಕಂಡು ಬಂದ ತಕ್ಷಣ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅದು ನಿಜವಾಗಿದ್ದರೆ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲು ಮಾಡಬೇಕು. ಹೀಗಾದರೆ ಮುಂದೆ ಬಾಲ್ಯ ವಿವಾಹಗಳು ನಡೆಯುವದಿಲ್ಲ. ಎಲ್ಲಾ ಭಾಗಿದಾರ ಇಲಾಖೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾತ್ರ ಬಹಳ ಮುಖ್ಯವಾಗಿದ್ದು. ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಬಾಲ್ಯ ವಿವಾಹ ಮಾಡುವ ಮತ್ತು ಅದಕ್ಕೆ ಪ್ರೋತ್ಸಾಹ ನೀಡುವ ವ್ಯಕ್ತಿಗೆ, ಹುಡುಗಿಯ ಪೋಷಕರಿಗೆ ಮತ್ತು ನಿರ್ದಿಷ್ಟ ವ್ಯಕ್ತಿಗೆ 3 ತಿಂಗಳ ಜೈಲು ಶಿಕ್ಷೆಯನ್ನು ಮತ್ತು ಆ ಸಮಯಕ್ಕೆ ಸೂಚಿಸಿದ ದಂಡ ವಿಧಿಸಲಾಗುತ್ತದೆ. ಬಾಲ್ಯ ವಿವಾಹವು ಒಂದು ಸಾಮಾಜಿಕ ಪಿಡುಗಾಗಿದ್ದು ಇದರ ನಿರ್ಮೂಲನೆಗಾಗಿ ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಮತ್ತು ಸಮಾಜದ ಪಾತ್ರವು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಬಾಲಕಿಯರ ಬಾಲ ಮಂದಿರ, ಜಿಲ್ಲೆಯಲ್ಲಿ ಇಲ್ಲಿಯವರೆಗೆ ದಾಖಲಾದ ಪೊಕ್ಸೊ ಪ್ರಕರಣಗಳ ಮಾಹಿತಿ, ಮಾತೃವಂದನಾ ಯೋಜನೆ, ಸಖಿಒನ್ ಸ್ಟಾಫ್, ಸ್ವಾಧಾರ ಗೃಹ ಸೇರಿದಂತೆ ಇತರೆ ವಿಷಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಅವುಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುವುದರ ಜೊತೆಗೆ ಜಿಲ್ಲೆಯ ಹೆಚ್ಚಿನ ಪ್ರಗತಿ ಸಾಧಿಸಬೇಕು ಹಾಗೂ ದೇವದಾಸಿ ಮತ್ತು ಎಚ್.ಐ.ವಿ ಪೀಡಿತ ಮಹಿಳೆಯರಿಗೆ ಜಾಗವಿದ್ದರೆ ಅವರಿಗೆ ಮನೆ ಕಟ್ಟಿಸಿಕೊಡಲು ಅವಕಾಶವಿದ್ದು ಅಂತವರ ಪಟ್ಟಿ ನೀಡುವಂತೆ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್ ಮಾತನಾಡಿ, ಬೀದರ ಜಿಲ್ಲೆಯಲ್ಲಿ ಏಪ್ರಿಲ್-2023 ರಿಂದ ಫೆಬ್ರವರಿ-2024 ರವರೆಗೆ ಒಟ್ಟು 31 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ನಾಲ್ಕು ಬಾಲ್ಯ ವಿವಾಹಗಳು ನಡೆದಿದ್ದು ಅವುಗಳನ್ನು ನಡೆಸಿದವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ ಹಾಗೂ ಸದರಿ ಪಾಲಕರಿಂದ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅವರಿಗೆ ಬಾಲ್ಯವಿವಾಹದ ಕುರಿತು ಅರಿವು ಮೂಡಿಸಿ, ಸದರಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಮಹೇಶ ಮೆಘಣ್ಣವರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಗುರುರಾಜ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸದಾಶಿವ ಬಡಿಗೇರ, ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಎನ್.ಜಿ.ಓ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Maithri S

Recent Posts

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

5 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

21 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

34 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

48 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

1 hour ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

1 hour ago