Categories: ಬೀದರ್

ಹುಮನಾಬಾದ್ ಬಿ ಫಾರಂ ನೀಡಲು 50 ಲಕ್ಷಕ್ಕೆ ಬೇಡಿಕೆ : ಅಂಕುಶ್ ಗೋಖಲೆ ಆರೋಪ

ಹುಮನಾಬಾದ್‌ : ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆ ಮಾಡಿದ್ದು, ಬಿ ಫಾರಂ ನೀಡಲು ₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ಅಂಕುಶ್ ಗೋಖಲೆ ಆರೋಪಿಸಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪಕ್ಷದ ಅಭ್ಯರ್ಥಿಯೆಂದು ಅಧಿಕೃತವಾಗಿ ನನ್ನ ಹೆಸರನ್ನು ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್‌ 13ರಂದು ಬಿ ಫಾರಂ ತೆಗೆದುಕೊಳ್ಳಲು ಬೆಂಗಳೂರಿಗೆ ಹೋದಾಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಅಶೋಕ್ ಸಿದ್ದಾರ್ಥ, ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಕೃಷ್ಣ ಮೂರ್ತಿ, ಮಾನಸಂದ್ರ ಮುನಿಯಪ್ಪ ಅವರು ನಿಮ್ಮಗೆ ಟಿಕೆಟ್ ನೀಡುವುದಿಲ್ಲ ಎಂದರು. ಯಾಕೆ ಟಿಕೆಟ್ ನೀಡುವುದಿಲ್ಲ, ಹಾಗಿದ್ದರೆ ನನ್ನ ಹೆಸರು ಏಕೆ ಘೋಷಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನೀವು ಪಕ್ಷಕ್ಕೆ ₹ 50 ಲಕ್ಷ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ಗಂಭೀರ ಆರೋಪ ಮಾಡಿದರು.

‘ಬಹುಜನ ಸಮಾಜ ಪಕ್ಷ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾರಿಕೊಂಡಿದ್ದಾರೆ. ಹೀಗಾಗಿ ಜಿಲ್ಲಾ ಬಿಎಸ್ಪಿಯ ಮಾಜಿ ಅಧ್ಯಕ್ಷ ಜಮಿಲ್ ಖಾನ್ ಸೇರಿದಂತೆ ಇತರರು ರಾಜೀನಾಮೆ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ’ ಎಂದು ತಿಳಿಸಿದರು.

ಪಕ್ಷದ ಅಭ್ಯರ್ಥಿಯಾಗಿ ಕ್ಷೇತ್ರದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆ. ಮುಂದಿನ ರಾಜಕೀಯ ಬೆಳವಣಿಗೆ ಬಗ್ಗೆ ಏಪ್ರಿಲ್ 16ರಂದು ಕಾರ್ಯಕತರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮುಂದಿನ ಹೆಜ್ಜೆ ನಿರ್ಧರಿಸಲಾಗುವುದು ಎಂದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

13 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

31 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

52 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago