ಬೀದರ್

ರೈತರ ಹಿತ ಮರೆತಿರುವ ಢೋಂಗಿ ಕಾಂಗ್ರೆಸ್ ಸರ್ಕಾರ: ಆರ್. ಅಶೋಕ್

ಬೀದರ್: ತಿಂಗಳು ಕಳೆದರೂ ರೈತರಿಗೆ ಬರ ಪರಿಹಾರ ವಿತರಣೆಯಲ್ಲಿ ನಿಷ್ಕಾಳಜಿ ತೋರುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಢೋಂಗಿತನದ ಮುಖವಾಡ ಧರಿಸಿದೆ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಬೀದರ್ ತಾಲ್ಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುಳ್ಳು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರನ್ನು ಮರುಳು ಮಾಡುವ ಮೂಲಕ ಅಧಿಕಾರಕ್ಕೆ ಬಂದ ನಂತರ ರೈತರ ಸಂಕಷ್ಟ ನಿವಾರಿಸಲು ಪರಿಹಾರ ವಿತರಣೆಯಲ್ಲಿ ಕ್ರಮ ವಹಿಸುತ್ತಿಲ್ಲ ಸಿಎಂ ಸಿದ್ದರಾಮಯ್ಯನವರು ಮಾತೆತ್ತಿದರೆ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನ ಏನಾಯಿತು?

ರಾಜ್ಯದ ಮುಖ್ಯಮಂತ್ರಿ ಸಾರ್ವಜನಿಕವಾಗಿ ಸುಳ್ಳು ಹೇಳುವುದು ಶೋಭೆ ತರುವುದಿಲ್ಲ ಈ ನಿಷ್ಕಾಳಜಿ ಧೋರಣೆ ವಿರುದ್ಧ ಬಿಜೆಪಿ ರಾಜ್ಯದಲ್ಲಿ ಹೋರಾಟ ನಡೆಸಲಿದೆ ಎಂದುತ್ತಿದ್ದರು. ರೈತರಿಗೆ ಬೆಂಬಲಿಸಿ ಸಕಾಲದಲ್ಲಿ ಬರ ಪರಿಹಾರ ವಿತರಣೆಯಾಗಲು ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದ ಅಭಿವೃದ್ಧಿ ಕಾಮಗಾರಿಗಳು ನಿಂತು ಹೋಗಿವೆ, ಗುತ್ತಿಗೆದಾರರಿಗೆ ಹಿಂದಿನ ಮುಗಿದಿರುವ ಕಾಮಗಾರಿಗಳ ಹಣ ಬಿಡುಗಡೆ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ಇತಿಹಾಸದಲ್ಲೇ ಇಂತಹ ಭ್ರಷ್ಟ ಸರ್ಕಾರ ಕಂಡಿರಲಿಲ್ಲ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಹೋಗಲು ದರೋಡೆಯ ಸ್ಕೀಂ, ರಾಜ್ಯದಲ್ಲಿ ಕರ ಪಾವತಿದಾರರ ಹಣ ನೆರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ಕಾಂಗ್ರೆಸ್ ಪಕ್ಷ ಹಂಚುತ್ತಿದೆ ಈ ಕುರಿತು ತೆಲಂಗಾಣ ರಾಜ್ಯ ಸರ್ಕಾರ ಬಹಿರಂಗವಾಗಿ ಹೇಳಿಕೆ ನೀಡಿದೆ.

ಅಧಿಕಾರದ ಹಪಾಹಪಿ ಇರುವ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಮಾಡಿದಂತೆ ಇತರೆ ರಾಜ್ಯಗಳಲ್ಲಿ ಆಮಿಷ ಒಡ್ಡಿ ಶತಾಯಗತಾಯ ಮಾಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಪರ್ಯಾಯ ಹೆಸರೇ ಕಾಂಗ್ರೆಸ್ ರಾಜ್ಯ ಹಾಗೂ ದೇಶದ ಜನತೆ ಎಚ್ಚೆತ್ತು ಕಾಂಗ್ರೆಸ್ ಪಕ್ಷವನ್ನು ಶತಮಾನಗಳವರೆಗೆ ಅಧಿಕಾರದಿಂದ ದೂರವಿಟ್ಟರೇನೆ ದೇಶ ಹಾಗೂ ರಾಜ್ಯ ಎಲ್ಲಾ ಸಮುದಾಯಗಳು ಶಾಂತಿಯಿಂದ ಸಹಬಾಳ್ವೆಯ ಜೊತೆಗೆ ಅಭಿವೃದ್ಧಿ ನಡೆಸಬಹುದು ಎಂದು ಹೇಳಿದರು.

Ashika S

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

16 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

44 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago