ಬೀದರ್

ಶಿಕ್ಷಣ ಕ್ಷೇತ್ರದ ಕ್ರಾಂತಿ ಅತ್ಯಗತ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ಹನ್ನೊಂದನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡುವ ಮೂಲಕ ಸಮಾಜ ಸುಧಾರಣೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅದರಂತೆಯೇ ಈಗ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಬೇಕಾಗಿರುವುದು ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್ ಮತ್ತು ಸೈನ್ಸ್ ಲ್ಯಾಬ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದರು.

ಡಾ. ಬಿ.ಆರ್ ಅಂಬೇಡ್ಕರ್ ರವರು ಯಾವುದೇ ಅತ್ಯುತ್ತಮ ಸೌಕರ್ಯಗಳು ಇಲ್ಲದ ಕಾಲದಲ್ಲಿಯೇ ಕಷ್ಟಪಟ್ಟು ಓದಿ ಭಾರತಕ್ಕೆ ಅತ್ಯುತ್ತಮವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ.

ಈಗ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗಳಾಗಿವೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ತಮ್ಮ ಮನೆಯ ಮಕ್ಕಳಿಗೆ ಅಕ್ಷರ ಜ್ಞಾನ ಕಲ್ಪಿಸಿಕೊಡುವುದು ಅವಶ್ಯಕವಾಗಿದೆ.

ಯಾರಾದರೂ ಏನಾದ್ರು ಸಾಧನೆ ಮಾಡಿದ್ದಾರೆ ಎಂದರೆ ಅದು ಅವರಿಗೆ ಸಿಕ್ಕ ಶಿಕ್ಷಣ, ಅಕ್ಷರ ಜ್ಞಾನದಿಂದ ಸಾಧ್ಯವಾಗಿರುತ್ತದೆ.
ನಾನು ಶಾಸಕನಾದಾಗಿನಿಂದಲೂ ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗಾಗಿ ಬಹಳಷ್ಟು ಅನುದಾನವನ್ನು ಒದಗಿಸಿಕೊಡುತ್ತಾ ಬಂದಿದ್ದೇನೆ. ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಕ್ಲಾಸ್ ರೂಮ್, ಅಂತರ್ಜಾಲ ಸೌಕರ್ಯ, ಮಾದರಿ ಶಾಲೆಗಳ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಟ್ಟಿದ್ದೇನೆ. ಈಗಾಗಲೇ ಸ್ಮಾರ್ಟ್ ಕ್ಲಾಸ್ ಗಳ ರಚನೆಯಾಗಿವೆ. ಮುಂದಿನ ದಿನಗಳಲ್ಲಿ ಕೂಡ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಡುವ ಕೆಲಸ ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ವೇಳೆ ಮಾತನಾಡಿದ ಕಲಬುರಗಿ ವಿಭಾಗದ ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಲಕ್ಷ್ಮಿ ಶ್ರೀನಿವಾಸರಾವ್ ಪೆಂಟಪಲ್ಲಿರವರು, ವಿದ್ಯಾರ್ಥಿಗಳು ದೇವರಿದ್ದಂತೆ. ನಾವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಎಸ್ಆರ್ ಆಕ್ಟಿವಿಟಿಗಳಿಗೆ ಬಹಳಷ್ಟು ಹಣ ನೀಡುತ್ತಿದ್ದೇವೆ‌. ನಮ್ಮ ಬ್ಯಾಂಕಿನ ಲಾಭದ ಶೇ. ಒಂದರಷ್ಟು ಹಣವನ್ನು ಶಾಲೆಗಳ ಅಭಿವೃದ್ಧಿ, ಸಮಾಜದ ಅಭಿವೃದ್ಧಿಗೆ ಖರ್ಚು ಮಾಡುತ್ತಿದ್ದೇವೆ ಎಂದರು.

ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಲೈಬ್ರರಿ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ, ಮಕ್ಕಳ ಕಲಿಕೆಯ ಅನುಕೂಲಕ್ಕಾಗಿ ನಾವು ಸರ್ಕಾರಿ ಶಾಲೆಗಳಿಗೆ ಹಣ ಒದಗಿಸುತ್ತಿದ್ದೇವೆ. ಮನ್ನಾಎಖೇಳ್ಳಿಯ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಪ್ಲಾಂಟ್ (ಆರ್ಒ ಪ್ಲಾಂಟ್) ನಿರ್ಮಿಸಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆಂದು ಬೀದರಿನ ಎಸ್ಬಿಐ ರಿಜಿನಲ್ ಮ್ಯಾನೇಜರ್ ಹರೀಶ್ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಲಕ್ಷ್ಮಿ ಶ್ರೀನಿವಾಸರಾವ್ ಪೆಂಟಪಲ್ಲಿ, ಬೀದರಿನ ಎಸ್ಬಿಐ ರಿಜಿನಲ್ ಮ್ಯಾನೇಜರ್ ಹರೀಶ್, ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗುಂಡಮ್ಮ ಸುಭಾಷ ನಾಟಿಕರ್, ಉಪಾಧ್ಯಕ್ಷ ಸೈಯದ್ ಖದೀರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಪಿಎಸ್ಐ ಸುದರ್ಶನ್ ರೆಡ್ಡಿ, ಎಸ್ಬಿಐ ಮ್ಯಾನೇಜರ್ ಶ್ಯಾಮಕುಮಾರ್ ಯಾದವ್, ಶಾಲೆಯ ಮುಖ್ಯೋಪಾಧ್ಯಾಯ ಮಾರುತಿ ಕೆ, ಶಿವಕುಮಾರ್, ದಿಗಂಬರ, ಅಶೋಕ್, ಸಂತೋಷ ಹಳ್ಳಿಖೇಡ್, ಕುಪ್ಪಣ್ಣ, ವಿವಿಧ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ನೆಕ್ಸ್ಟ್ ಎಜುಕೇಶನ್ ಸಂಸ್ಥೆಯ ಪ್ರಮುಖರು, ಮಕ್ಕಳು ಸೇರಿದಂತೆ ಅನೇಕರಿದ್ದರು.

Sneha Gowda

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

1 min ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

16 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

38 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

40 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

57 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago