News Karnataka Kannada
Tuesday, April 23 2024
Cricket
ಬೀದರ್

ಬೀದರ್‌: ಕಾರ್ಯಪಾಲಕ ಎಂಜಿನಿಯರ್‌ ಅಭಯ್‌ ಕುಮಾರ್‌ ಅಮಾನತು

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಿಯಮಾನುಸಾರ ಕೆಲಸ ಮಾಡದೆ ಆರ್ಥಿಕ ನಷ್ಟ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬುಡಾದ ಹಿಂದಿನ ಆಯುಕ್ತ, ಶಹಾಬಾದ್‌ ನಗರಸಭೆಯ ಹಾಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಭಯ್‌ ಕುಮಾರ್‌ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
Photo Credit : News Kannada

ಬೀದರ್‌: ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಿಯಮಾನುಸಾರ ಕೆಲಸ ಮಾಡದೆ ಆರ್ಥಿಕ ನಷ್ಟ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬುಡಾದ ಹಿಂದಿನ ಆಯುಕ್ತ, ಶಹಾಬಾದ್‌ ನಗರಸಭೆಯ ಹಾಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಭಯ್‌ ಕುಮಾರ್‌ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ದಾಂಡೇಲಿ ನಗರಸಭೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ (ಪರಿಸರ) ಹುದ್ದೆಗೆ ಸ್ಥಳಾಂತರಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿರುಮಲಾಚಾರ್‌ ಜೆ. ಆದೇಶ ಹೊರಡಿಸಿದ್ದಾರೆ.

ನಿವೇಶನಗಳನ್ನು ಹಂಚಿಕೆ ಮಾಡುವಾಗ ನಿಯಮ ಪಾಲಿಸದೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಮೂವರು ಅಧಿಕಾರಿಗಳನ್ನು ಒಳಗೊಂಡ ಸಮಿತಿಯಿಂದ ಜಂಟಿ ತನಿಖೆ ನಡೆಸಲಾಗಿತ್ತು. ನಿಯಮ ಪಾಲಿಸದೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿ ಸಲ್ಲಿಸಿರುವುದರಿಂದ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು