News Karnataka Kannada
Wednesday, May 01 2024
ಬೀದರ್

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಖಾತರಿಪಡಿಸಿಕೊಳ್ಳಿ: ಗೊವಿಂದ ರೆಡ್ಡಿ

ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ರವರ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2024 ರ ಅಂಗವಾಗಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Photo Credit : News Kannada

ಬೀದರ್: ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ರವರ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2024 ರ ಅಂಗವಾಗಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 22-01-2024 ರಂದು ಅಂತಿಮ ಮತದಾರರ ಪಟ್ಟಿಯನ್ನು ಹಾಗೂ ಸೇವಾ ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ತಹಸೀಲ್ ಕಛೇರಿ, ಸಹಾಯಕ ಆಯುಕ್ತರ ಕಛೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಕ್ಕೆ ಅಂಟಿಸಿ ಪ್ರಚರಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಲು ಸೂಚಿಸಿದೆ.

ಒಂದು ವೇಳೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಬಿಟ್ಟುಹೊದಲ್ಲಿ ಅಥವಾ ಸೇರ್ಪಡೆಗಾಗಿ ನಿರಂತರ ಕಾಲಾವಕಾಶ ಇರುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಗೊವಿಂದ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರಂತೆ ಜಿಲ್ಲೆಯಲ್ಲಿ ಪುರುಷ ಮತದಾರರು 696687 ಮತ್ತು ಮಹಿಳಾ ಮತದಾದರರು 651332 ಸೇರಿ ಒಟ್ಟು 1348019 ಮತದಾರರು ಬೀದರ ಜಿಲ್ಲೆಯಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು