News Karnataka Kannada
Saturday, April 13 2024
Cricket
ಬೀದರ್

137 ಗ್ರಾಮಗಳ ಕುಡಿವ ನೀರಿನ ಯೋಜನೆಗೆ ಸಂಪುಟ ಅಸ್ತು: ಈಶ್ವರ ಬಿ. ಖಂಡ್ರೆ

ಜಲಜೀವನ್‌ ಮಿಷನ್‌ ಯೋಜನೆಯಡಿ ₹ 330 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಬಗದಲ್‌ ಹಾಗೂ ಇತರೆ 104, ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳ್ಳಿ ಮತ್ತು ಸುತ್ತಮುತ್ತಲಿನ 32 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
Photo Credit : News Kannada

ಬೀದರ್: ಜಲಜೀವನ್‌ ಮಿಷನ್‌ ಯೋಜನೆಯಡಿ ₹ 330 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಬಗದಲ್‌ ಹಾಗೂ ಇತರೆ 104, ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳ್ಳಿ ಮತ್ತು ಸುತ್ತಮುತ್ತಲಿನ 32 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಬೀದರ್ ತಾಲ್ಲೂಕಿನ 105, ಚಿಟಗುಪ್ಪ ತಾಲ್ಲೂಕಿನ 33 ಸೇರಿದಂತೆ ಒಟ್ಟು 137 ಜನವಸತಿಗಳಿಗೆ ಕೊಳವೆ ನೀರು ಸರಬರಾಜು ಯೋಜನೆ/ಕಿರು ನೀರು ಸರಬರಾಜು ಯೋಜನೆ ಅಡಿಯಲ್ಲಿ ತೆರೆದ ಬಾವಿ/ಕೊಳವೆ ಬಾವಿಯನ್ನು ಜಲಮೂಲವನ್ನಾಗಿ ಪರಿಗಣಿಸಿ ನೀರು ಪೂರೈಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

137 ಗ್ರಾಮಗಳ ಕುಡಿಯುವ ನೀರು ಯೋಜನೆಯ ಬಂಡವಾಳ ವೆಚ್ಚ ₹ 291.20 ಕೋಟಿ, ಸಗಟು ವೆಚ್ಚ ₹ 38.80 ಕೋಟಿ ಸೇರಿ ಒಟ್ಟು ₹ 330 ಕೋಟಿ ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಬಂಡವಾಳ ವೆಚ್ಚದ ಶೇ 50ರಷ್ಟು ಅಂದರೆ ₹ 145 ಕೋಟಿ ಒದಗಿಸುತ್ತದೆ. ರಾಜ್ಯ ಸರ್ಕಾರವು ₹ 145 ಕೋಟಿ ಜೊತೆಗೆ ಸಗಟು ನೀರಿನ ವೆಚ್ಚವಾದ ₹ 38.80 ಕೋಟಿ ಸೇರಿ ಒಟ್ಟು ₹ 184.40 ಕೋಟಿ ಭರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು