Categories: ಬೀದರ್

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಬೀದರ್ : ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ ನಶೆ ಗುಳಿಗೆಯನ್ನು ವಶಕ್ಕೆ ಪಡೆದಿದೆ.

ಮಾಂಗರವಾಡಿಯ ಅಶೋಕ ಮತ್ತು ವಿಕಾಸ್ ಮನೆಯ ಮೇಲೆ ದಾಳಿ ಮಾಡಿ 3065 ನಶೆ ಬರೋ ಡ್ರೆಮಿಡಾಲ್ ಕ್ಯಾಪಸೂಲ್ ವಶಕ್ಕೆ ಪಡೆದಿದೆ.

ದಾಳಿ ಸಂದರ್ಭದಲ್ಲಿ ಆರೋಪಿ ಅಶೋಕ ಮತ್ತು ವಿಕಾಸ ಪರಾರಿಯಾಗಿದ್ದಾರೆ. ಮನೆ ಪರಿಶೀಲನೆ ನಡೆಸಿದ 3065 ನಶೆ ಮಾತ್ರೆಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದಾಳಿಯಲ್ಲಿ ಅಬಕಾರಿ ಡಿಸಿ ಆಯುಕ್ತ ಸಂಗನಗೌಡ ಹೊಸಳ್ಳಿ, ಅಬಕಾರಿ ಉಪ ಆಯುಕ್ತರಾದ ರವಿ ಮುರಗೋಡ್,ಹಣಮಂತ ಗುತ್ತೆದಾರ ಹಾಗೂ ಅಬಕಾರಿ ಸಿಬ್ಬಂದಿಗಳು ಭಾಗಿಯಾಗಿದ್ದರು. ಅಬಕಾರಿ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Chaitra Kulal

Recent Posts

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

11 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

32 mins ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

36 mins ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

51 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

59 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

1 hour ago