ಬೀದರ್: ಜಿಲ್ಲೆಯಿಂದ ಐವರನ್ನು ಗಡಿಪಾರು ಮಾಡಲಾಗಿದೆ ಎಂದು ನಗರದಲ್ಲಿ ಎಸ್ಪಿ ಚನ್ನಬಸವಣ್ಣ ಲಂಗೋಟಿ ಮಾಹಿತಿ ನೀಡಿದ್ದಾರೆ. ಘೋರ ಅಪರಾಧ ಕೃತ್ಯಗಳಲ್ಲಿ ಶಾಮಿಲಾಗಿದ್ದ ಐವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ಜರುಗಿಸಲಾಗಿದ್ದು ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ಐವರ ಪೈಕಿ ಒಬ್ಬನ ವಿರುದ್ಧ ಶಾಂತಿ, ಸೌಹಾರ್ದತೆಗೆ ಧಕ್ಕೆ, ಕಳ್ಳತನ, ಮಾರಣಾಂತಿಕ ಹಲ್ಲೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ.
ಈ ಹಿಂದೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದರೂ ಸುಧಾರಿಸಿಕೊಂಡಿಲ್ಲಾ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಧಕ್ಕೆ ಹಿನ್ನೆಲೆ ಗೂಂಡಾ ಕಾಯ್ದೆಯಡಿ ಕ್ರಮ ಬೀದರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಮಾಹಿತಿ ನೀಡಿದರು.