ಬೀದರ್

ಶಿಕ್ಷಕರ ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳಿ- ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ಧರ್ಮಾಪೂರ ಗ್ರಾಮದಲ್ಲಿರುವ ಶಿಕ್ಷಕರ ಕೊರತೆಯನ್ನು ಕೂಡಲೇ ನಿವಾರಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಧರ್ಮಾಪೂರ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ – ಹಳ್ಳಿ ಕಡೆ (ಗ್ರಾಮ ವಾಸ್ತವ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮದಲ್ಲಿ ಶಿಕ್ಷಕರ ಕೊರತೆಯಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮದಲ್ಲಿ ಅಕ್ರಮವಾಗಿ ಸರಾಯಿ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಅಕ್ರಮ ಸರಾಯಿ ಮಾರಾಟ ತಡೆಗಟ್ಟಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಗ್ರಾಮದಲ್ಲಿ ಕೆಲವು ಸಿಸಿ ರಸ್ತೆಗಳು ಆಗಬೇಕಾಗಿದೆ. ಅಂಗನವಾಡಿ ಕಟ್ಟಡ ದುರಸ್ತಿ ಮಾಡಬೇಕಾಗಿದೆ. ಶಾಲೆ ಕಟ್ಟಡ, ಪಂಚಾಯತಿ ಕಟ್ಟಡಗಳು ದುರಸ್ತಿಗೆ ಬಂದಿವೆ ಅವುಗಳನ್ನು ಸರಿ ಪಡಿಸಿ ಎಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು.

ಹಂತಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ. ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು. ಇದೇ ವೇಳೆ ಶಾಸಕರ ಸಮ್ಮುಖದಲ್ಲಿ ವಿವಿಧ ಯೋಜನೆಗಳ ಪ್ರಮಾಣ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೀದರ್ ತಹಶಿಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಮುಖಂಡರು ಸೇರಿದಂತೆ ಅನೇಕರಿದ್ದರು.

Sneha Gowda

Recent Posts

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

2 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

12 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

16 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

21 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

24 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

42 mins ago