ಬೀದರ್

ದೇವಸ್ಥಾನದಲ್ಲಿ ಪಾಠ ಬೋಧನೆ ,ಜಾತಿ ವಿವಾದಗಳು ಬೇಡ ಶಿಕ್ಷಣಕ್ಕೆ ಒತ್ತು ಕೊಡಿ: ಗ್ರಾಮಸ್ಥರು

ಬೀದರ್: ರಾಜ್ಯದಲ್ಲಿ ಹಿಜಾಬ್, ಕೇಸರಿ ಸಾಲು,ಮಹಾಪುರುಷರ ಭಾವಚಿತ್ರ ಅಳವಡಿಕೆ ವಿವಾದ ಸಮವಸ್ತ್ರ ಸಮರ ಎಂಬ ಸುದ್ದಿಗಳನ್ನು ಇತ್ತೀಚಿಗೆ ಸಾಕಷ್ಟು ಹೆಚ್ಚಾಗಿ ಕೇಳು ಬರುತ್ತಿದೆ ಇಂತಹ ಸಮಯದಲ್ಲಿ ಯಾವುದು ಮಹತ್ವ ಎಂಬುದಕ್ಕಿಂತ ಮೊದಲು ಶಿಕ್ಷಣದ ಮಹತ್ವವನ್ನು ಅರಿಯಬೇಕಾದುದು ಉತ್ತಮ ಎಂಬುದು ನಮ್ಮ ಅಭಿಪ್ರಾಯ. ಇನ್ನು  ಭಾರತದಲ್ಲಿ ಸರ್ವ ಪ್ರಜೆಗಳಿಗೆ ಸಮಾನತೆ ಎಂಬ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಗಿದೆ.

ಇಂತಹ ಪ್ರಮುಖ ಅಂಶಗಳನ್ನು ಒಳಗೊಂಡ ಸಂವಿಧಾನವನ್ನು ರಚಿಸಲು ಸಾಧ್ಯವಾದುದು ಉತ್ತಮ ಶಿಕ್ಷಣವೇ. ಭಾರತದ ಸಂವಿಧಾನಕ್ಕೆ ‘ಸಂವಿಧಾನ ಶಿಲ್ಪಿ’ ಎಂದೇ ಹೆಸರಾದ ಡಾ ಬಿ ಆರ್ ಅಂಬೇಡ್ಕರ್ ರವರ ಕೊಡುಗೆ ಅಪಾರವಾದುದು. ಅವರಿಗೆ ಈ ಜವಾಬ್ದಾರಿ ಕೊಟ್ಟಿದ್ದು, ಅವರು ಹೊಂದಿದ್ದ ಅಪಾರ ಜ್ಞಾನವೇ. ಅದು ಸಿಕ್ಕಿದ್ದು ಅವರು ಪಡೆದ ಶಿಕ್ಷಣ ದಿಂದಲೇ ಎಂಬುದನ್ನು ಯಾರು ಮರೆಯುವ ಹಾಗಿಲ್ಲ.

ಹುಮನಾಬಾದ್‌ ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.

ಶಾಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿವರೆಗೆ ಕಲಿಕೆಗೆ ಅವಕಾಶವಿದ್ದು, 16 ಮಕ್ಕಳು ಪ್ರವೇಶಾತಿ ಪಡೆದಿದ್ದಾರೆ. ಶಾಲೆಯಲ್ಲಿ ಒಬ್ಬರು ಮುಖ್ಯಶಿಕ್ಷಕ ಹಾಗೂ ಒಬ್ಬರು ಸಹ ಶಿಕ್ಷಕ ಇದ್ದಾರೆ.

ಶಾಲೆಯ ಒಂದು ಕೊಠಡಿಯ ಸಿಮೆಂಟ್, ಕಬ್ಬಿಣದ ಸಲಾಕೆಗಳು ಕಳಚಿ ಬೀಳುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ಗ್ರಾಮದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪಾಠ ಮಾಡುವ ವ್ಯವಸ್ಥೆ ಮಾಡಿದ್ದಾರೆ.

ಶಾಲೆಯಲ್ಲಿ ಎರಡು ಕೊಠಡಿಗಳಿದ್ದು, ಕಟ್ಟಡ ಶಿಥಿಲಗೊಂಡು ಹಲವು ವರ್ಷಗಳೇ ಕಳೆದಿವೆ. ಶಾಲೆಗೆ ಕೌಂಪೌಡ್‌ ಕೂಡ ಸಂಪೂರ್ಣ ಹಾಳಾಗಿದೆ. ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲ.

ಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಶಿಕ್ಷಣ ಇಲಾಖೆಗೆ, ಜಿಲ್ಲಾಧಿಕಾರಿಗೆ ಶಾಲೆ ಕಟ್ಟಡ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಚೆಗೆ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ದೂರು. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಶಾಲೆಯನ್ನು ಸಂಪೂರ್ಣ ಕೆಡವಿ ನೂತನ ಕಟ್ಟಡ ನಿರ್ಮಿಸಬೇಕು ಎಂದು ಗ್ರಾಮಸ್ಥರು ನ್ಯೂಸ್ ಕನ್ನಡದೊಂದಿಗೆ ಮಾತನಾಡಿ ಒತ್ತಾಯಿಸಿದ್ದಾರೆ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago