Categories: ಬೀದರ್

ಏ.14ರಂದು ಮೂಲನಿವಾಸಿ ಫೌಂಡೇಶನ್‌ ಅಸ್ತಿತ್ವಕ್ಕೆ

ಬೀದರ್: ‘ದಲಿತ ಸಮದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏಪ್ರಿಲ್‌ 14ರಂದು ‘ನಮ್ಮ ಮೂಲನಿವಾಸಿ ಫೌಂಡೇಷನ್‌’ ಸಂಸ್ಥೆ ಹುಟ್ಟು ಹಾಕಲಾಗುತ್ತಿದೆ’ ಎಂದು ಮುಖಂಡರಾದ ವೈಜಿನಾಥ ಸೂರ್ಯವಂಶಿ, ವಿಠ್ಠಲದಾಸ ಪ್ಯಾಗೆ ತಿಳಿಸಿದರು.

ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.14ರಂದು ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಜಯಂತಿ ಉತ್ಸವದ ದಿನವೇ ಫೌಂಡೇಷನ್‌ ಆರಂಭಿಸಲಾಗುವುದು. ಮೌಲ್ಯಾಧಾರಿತ, ರಚನಾತ್ಮಕ, ಧನಾತ್ಮಕ ಹಾಗೂ ಕ್ರಿಯಾಶೀಲ ಚಟುವಟಿಕೆಗಳನ್ನು ಆಯೋಜಿಸಿ ಸಮಾಜಕ್ಕೆ ಸಕಾರಾತ್ಮಕ ಸಂದೇಶ ಕೊಡಲು ಪ್ರಯತ್ನಿಸಲಾಗುವುದು’ ಎಂದರು.

‘ಸಂಸ್ಥೆಯ ಚಟುವಟಿಕೆಗಳು ಏ. 2ರಂದೇ ಆರಂಭವಾಗಲಿದೆ. ಏ. 2ರಿಂದ 7ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗುವುದು. ಕುಸ್ತಿ, ಕಬಡ್ಡಿ, ಅಥ್ಲೆಟಿಕ್ಸ್, ವಾಲಿಬಾಲ್ ಹಾಗೂ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗುವುದು.

ಇದರ ಮೂಲಕ ಪ್ರತಿಭೆಗಳನ್ನು ಗುರುತಿಸಲಾಗುವುದು. ತಂಡಗಳನ್ನು ಮಾಡಿ ಎಲ್ಲ ತಾಲ್ಲೂಕುಗಳಲ್ಲಿ ಪ್ರಚಾರ ಕೈಗೊಳ್ಳಲಾಗುವುದು. ಎಲ್ಲ ಗ್ರಾಮಗಳಿಗೆ ಹೋಗಿ ಅಂಬೇಡ್ಕರ್‌ ಭವನ, ಬುದ್ಧ ವಿಹಾರಗಳನ್ನು ಸ್ವಚ್ಛಗೊಳಿಸಲಾಗುವುದು. ಬುದ್ಧ, ಬಸವ, ಅಂಬೇಡ್ಕರ್‌ ಸದಾಶಯಗಳನ್ನು ಮನೆ ಮನೆಗೆ ತಲುಪಿಸಲಾಗುವುದು’ ಎಂದು ತಿಳಿಸಿದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago