ಔರಾದ್: ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗೈರು ಆದ ವಡಗಾಂವ್ (ದೇ) ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಶಿಕ್ಷಕಿ ಚಂದ್ರಕಲಾ, ವೇದಮಣಿ, ಎಜಾಜ್ ಬಾನು ಹಾಗೂ ಶಿಕ್ಷಕ ಜಯಕುಮಾರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಈ ನಾಲ್ವರು ಶಿಕ್ಷಕರು ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಗೈರು ಆಗಿ ಸರ್ಕಾರದ ನಿಯಮ ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸುವಂತೆ ಎಸ್ಡಿಎಂಸಿ ಅಧ್ಯಕ್ಷ ರಾಜಕುಮಾರ ವಿಶ್ವನಾಥ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ನೀಡಿದ್ದಾರೆ.
‘ಮಂಗಳವಾರ ವಡಗಾಂವ್ ಶಾಲೆಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಂಡಿದ್ದೇನೆ. ಮಹಾತ್ಮ ಗಾಂಧಿ ಜಯಂತಿಗೆ ಗೈರು ಆದ ಶಿಕ್ಷಕರಿಗೆ ಮುಖ್ಯ ಶಿಕ್ಷಕರಿಂದ ನೋಟಿಸ್ ಕೊಡಿಸಿದ್ದೇನೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ಮಕ್ಸೂದ್ ತಿಳಿಸಿದ್ದಾರೆ.