ಬೀದರ್: 2023-24ನೇ ಸಾಲಿನಲ್ಲಿ ನಡೆದ ದ್ವೀತಿಯ ಪಿ.ಯು.ಸಿ ಪರೀಕ್ಷೆಯಲ್ಲಿ ಬೀದರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದರ ನಗರದ ಮೀರಾಗಂಜನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾಲೇಜಿನಿಂದ ಅನ್ನೋನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 43 ವಿದ್ಯಾರ್ಥಿಗಳು ಹಾಗೂ ದ್ವೀತಿಯ ಶ್ರೇಣಿಯಲ್ಲಿ 1 ವಿದ್ಯಾರ್ಥಿ ಸೇರಿ ಒಟ್ಟು 56 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉರ್ತ್ತಿಣರಾಗಿದ್ದಾರೆ ಎಂದು ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿದ್ದಾರೆ.