News Karnataka Kannada
Tuesday, April 30 2024
ಬೀದರ್

ಹೆಚ್ಚು ವಿದ್ಯಾರ್ಥಿಗಳಿಗೆ ಐಟಿಐ ತರಬೇತಿ ಕೊಡಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

Give ITI training to more students: Minister Dr Sharanaprakash Patil
Photo Credit : News Kannada

ಬೀದರ್: ‘ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಐಟಿಐ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ಬಹಳ ಕಡಿಮೆ ಇದೆ. ಇದರ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಹೆಚ್ಚಿನವರಿಗೆ ತರಬೇತಿ ಕೊಡಬೇಕು’ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೌಶಲ್ಯಾಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹೈಸ್ಕೂಲ್ ಮತ್ತು ಪಿ.ಯು.ಸಿ ಕಾಲೇಜುಗಳಲ್ಲಿ ಈ ಕೋರ್ಸಿನ ಕುರಿತು ಹೆಚ್ಚು ಪ್ರಚಾರ ಕೈಗೊಳ್ಳಬೇಕು’ ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.

ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡುವುದರೊಂದಿಗೆ ಅವರಿಗೆ ಉದ್ಯೋಗ ಸಿಗುವಂತಾಗಲು ಕ್ಯಾಂಪಸ್ ಸಂದರ್ಶನ ಮತ್ತು ಉದ್ಯೋಗ ಮೇಳ ಆಯೋಜಿಸಬೇಕು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಎಲ್ಲಾ ಗ್ರಾಮ ಪಂಚಾಯಿತಿ ಹಂತಗಳಲ್ಲಿ ಪ್ರಚಾರ ಕೈಗೊಳ್ಳಬೇಕು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿ.ಡಿ.ಒ.ಗಳಿಗೆ ಈ ಕುರಿತು ಒಂದೇ ಗುರಿ ನಿಗದಿಪಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಶೇ 50ರಿಂದ 60ರಷ್ಟು ಹುದ್ದೆಗಳು ಐ.ಟಿ.ಐ ಕಾಲೇಜುಗಳಲ್ಲಿ ಖಾಲಿ ಇವೆ. ಹೆಚ್ಚಿನ ಐ.ಟಿ.ಐ. ಗಳಿಗೆ ಕಾಂಪೌಂಡ್‌ ಇಲ್ಲ. ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಬೇಕು ಎಂದು ಪ್ರಾಂಶುಪಾಲರು ಸಚಿವರಿಗೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು