Categories: ಬೀದರ್

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ಬೀದರ್: ‘ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ’ ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌ ಮುಖಂಡ ಎಸ್‌. ನಾರಾಯಣ ಅಭಿಪ್ರಾಯ ಪಟ್ಟರು. ಎಲ್ಲರಿಗೂ ಗೊತ್ತಿರುವಂತೆ ರಾಜ್ಯದಲ್ಲಿ ಭೀಕರ ಬರ ಇದೆ.

ಆದರೆ, ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅದರ ಬಿಸಿ ತಟ್ಟಿಲ್ಲ. ಒಂದು ತಿಂಗಳಿಂದ ರಾಜ್ಯದ ಹಲವೆಡೆ ಪ್ರಚಾರ ಕೈಗೊಂಡಿದ್ದೇನೆ. ಇದನ್ನು ಸ್ವತಃ ನಾನೇ ಅನುಭವಿಸಿದ್ದೇನೆ. ಜನ ಕೂಡ ನನಗೆ ಹೇಳಿದ್ದಾರೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ಯಾರಂಟಿಗಳು ಚುನಾವಣೆಯ ಗಿಮಿಕ್‌ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ರಾಜ್ಯ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯವೇನೂ ದಿವಾಳಿ ಆಗಿಲ್ಲ. ಅಭಿವೃದ್ಧಿ ಕೆಲಸಗಳು ಮುಂದುವರೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಅನೇಕ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಹಣಕಾಸು ಸಚಿವರೂ ಆಗಿರುವ ಅವರು ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡುವುದಿಲ್ಲ ಎಂದು ಹೇಳಿದರು.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪರವಾದ ಅಲೆ ಜೋರಾಗಿದೆ. ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಬೀದರ್‌, ಬಸವಕಲ್ಯಾಣದಲ್ಲಿ ಕೂಡ ಪ್ರಚಾರ ಕೈಗೊಂಡಿದ್ದು, ನಮ್ಮ ಪಕ್ಷದ ಅಭ್ಯರ್ಥಿ ಸಾಗರ್‌ ಖಂಡ್ರೆ ಕೂಡ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಮಾಧ್ಯಮ ವಕ್ತಾರ ಜಾರ್ಜ್‌ ಫರ್ನಾಂಡಿಸ್‌ ಹಾಜರಿದ್ದರು.

Nisarga K

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

13 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

36 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago