News Karnataka Kannada
Saturday, May 18 2024
ಬೀದರ್

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ನಗರಸಭೆ ಮಾಜಿ ಸದಸ್ಯರೂ ಆದ ಕಾಂಗ್ರೆಸ್ ಮುಖಂಡ ನಬಿ ಖುರೇಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Photo Credit : NewsKarnataka

ಬೀದರ್: ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ನಗರಸಭೆ ಮಾಜಿ ಸದಸ್ಯರೂ ಆದ ಕಾಂಗ್ರೆಸ್ ಮುಖಂಡ ನಬಿ ಖುರೇಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ವ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಏಕೈಕ ಪಕ್ಷವಾಗಿದೆ. ರೈತರು, ಬಡವರು, ಮಹಿಳೆಯರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಈಗಿನ ರಾಜ್ಯ ಸರ್ಕಾರದ ಕಾರ್ಯಗಳೇ ಇದಕ್ಕೆ ನಿದರ್ಶನವಾಗಿವೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದರು. ರಾಜ್ಯದ ಜನ ಈಗಲೂ ಅವುಗಳನ್ನು ಸ್ಮರಿಸುತ್ತಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಅತಿ ಹೆಚ್ಚು ಸ್ಥಾನಗಳು ಲಭಿಸಲಿವೆ. ಬೀದರ್ ಕ್ಷೇತ್ರದಲ್ಲಿ ಸಾಗರ್ ಖಂಡ್ರೆ ಗೆಲುವು ಖಚಿತವಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು