News Karnataka Kannada
Monday, April 29 2024
ಬೀದರ್

ಬೀದರ್ ಉತ್ಸವಕ್ಕೆ ಪರಂಪರೆ ನಗರಿ ಸಜ್ಜು

Heritage city gears up for Bidar festival
Photo Credit : By Author

ಬೀದರ್: ಬೀದರ್ ಉತ್ಸವಕ್ಕೆ ಪರಂಪರೆ ನಗರಿ ಸಜ್ಜುಗೊಂಡಿವೆ. ನಗರದ ಎಲ್ಲೆಡೆ ಉತ್ಸವದ ವೈಶಿಷ್ಟ ಪರಿಚಯಿಸುವ ಹಾಗೂ ಸಾರ್ವಜನಿಕರಿಗೆ ಸ್ವಾಗತ ಕೋರುವ ಕಟೌಟ್, ಬ್ಯಾನರ್ ಹಾಗೂ ಪೋಸ್ಟರ್‌ಗಳು ರಾರಾಜಿಸುತ್ತಿವೆ.

ಶನಿವಾರ (ಜ.7) ಸಂಜೆ 5.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಕೇಂದ್ರದ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನೀಲಕುಮಾರ ಘನ ಉಪಸ್ಥಿತಿ, ಶಾಸಕ ರಹೀಂಖಾನ್ ಅಧ್ಯಕ್ಷತೆ ವಹಿಸುವರು.

ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು