News Karnataka Kannada
Wednesday, April 24 2024
Cricket
ಬೀದರ್

ಬೀದರ್ ಜಿಲ್ಲೆಯಲ್ಲಿ ಜಪ್ತಿ ಮಾಡಲಾಗಿದ್ದ ಅಪಾರ ಪ್ರಮಾಣದ ಗಾಂಜಾ ನಾಶ

ಗಡಿ ಜಿಲ್ಲೆ ಬೀದರ್‌ನ ವಿವಿಧ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ 9 ಪ್ರಕರಣಗಳಿಂದ ವಶಪಡಿಸಿಕೊಳ್ಳಲಾಗಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅವರ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.
Photo Credit : News Kannada

ಬೀದರ್: ಗಡಿ ಜಿಲ್ಲೆ ಬೀದರ್‌ನ ವಿವಿಧ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ 9 ಪ್ರಕರಣಗಳಿಂದ ವಶಪಡಿಸಿಕೊಳ್ಳಲಾಗಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅವರ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.

ತಾಲೂಕಿನ ಧನ್ನೂರು ಗ್ರಾಮದಲ್ಲಿರುವ ಇನ್ವೆರೊ ಬಯೊಟೆಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 273 ಕೆಜಿ ತೂಕದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ಸ್ ಎಕ್ಸ್ಪೋಸರ್ ನಿಯಮಾನುಸಾರ ನಾಶ ಪಡಿಸಲಾಯಿತು.

ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಣೆ ಹಾಗೂ ಕಳ್ಳಸಾಗಾಟ ಮಾಡ್ತಿದ್ದ ವೇಳೆ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.

ಜಪ್ತಿ ಮಾಡಿಕೊಳ್ಳಲಾಗಿದ್ದ ಒಟ್ಟು 273 ಕೆಜಿ ಗಾಂಜಾವನ್ನು ಪೊಲೀಸರು ನಾಶ ಪಡಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐ, ಪಿಎಸ್ಐ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು