ಬೀದರ್: ಗಡಿ ಜಿಲ್ಲೆ ಬೀದರ್ನ ವಿವಿಧ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ 9 ಪ್ರಕರಣಗಳಿಂದ ವಶಪಡಿಸಿಕೊಳ್ಳಲಾಗಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅವರ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.
ತಾಲೂಕಿನ ಧನ್ನೂರು ಗ್ರಾಮದಲ್ಲಿರುವ ಇನ್ವೆರೊ ಬಯೊಟೆಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 273 ಕೆಜಿ ತೂಕದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ಸ್ ಎಕ್ಸ್ಪೋಸರ್ ನಿಯಮಾನುಸಾರ ನಾಶ ಪಡಿಸಲಾಯಿತು.
ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಣೆ ಹಾಗೂ ಕಳ್ಳಸಾಗಾಟ ಮಾಡ್ತಿದ್ದ ವೇಳೆ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
ಜಪ್ತಿ ಮಾಡಿಕೊಳ್ಳಲಾಗಿದ್ದ ಒಟ್ಟು 273 ಕೆಜಿ ಗಾಂಜಾವನ್ನು ಪೊಲೀಸರು ನಾಶ ಪಡಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐ, ಪಿಎಸ್ಐ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…