ಹುಮನಾಬಾದ್: ಜನರಲ್ ಸ್ಟೋರ್ ಮಾಲಿಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.
ಪಟ್ಟಣದ ಜೆ.ಕೆ. ಜನರಲ್ ಸ್ಟೋರ್ನಲ್ಲಿ ವಿದ್ಯುತ್ ದೀಪ ಖರೀದಿಗಾಗಿ ಹೋಗಿದ್ದ, ಸಂದರ್ಭದಲ್ಲಿ 13 ವರ್ಷದ ಬಾಲಕಿಗೆ ಸ್ಟೋರ್ ಮಾಲಿಕ ಅಬ್ದುಲ್ ಗಫಾರ್ (45) ಎಂಬಾತ ಲೈಂಗಿಕ ಕಿರುಕುಳಕ್ಕೆ ಯತ್ನಿಸುತ್ತಿದ್ದ ಎಂದು ಪೋಷಕರು ದೂರು ನೀಡಿದ್ದಾರೆ.
ಪೋಷಕರು ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ಹುಮನಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.